ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಾಚಕರ ವಾಣಿ: ಕೊಲ್ಲುವುದೊಂದೇ ಪರಿಹಾರವಲ್ಲ

Last Updated 6 ಜನವರಿ 2021, 19:31 IST
ಅಕ್ಷರ ಗಾತ್ರ

ನರಭಕ್ಷಕ ಚಿರತೆಗಳನ್ನು ಗುಂಡಿಕ್ಕಿ ಕೊಲ್ಲುವ ಕುರಿತು ತಜ್ಞರ ಜೊತೆ ಚರ್ಚಿಸಿ ಶೀಘ್ರವೇ ಆದೇಶ ಹೊರಡಿಸಲಾಗುವುದು ಎಂದು ಅರಣ್ಯ ಸಚಿವ ಆನಂದ್ ಸಿಂಗ್ ನೀಡಿರುವ ಹೇಳಿಕೆ ಒಪ್ಪಲಾಗದು. ಮನುಷ್ಯನ ಸ್ವಾರ್ಥ ಮತ್ತು ದುರಾಸೆಯಿಂದ ವನ್ಯಮೃಗಗಳ ಆಹಾರ ಸರಪಳಿಯೇ ನಶಿಸಿಹೋಗಿ, ಕಾಡುಪ್ರಾಣಿಗಳು ನಾಡಿನತ್ತ ಹೆಜ್ಜೆ ಹಾಕುತ್ತಿವೆ. ಹೀಗಾಗಿ, ಪ್ರಾಣಿಗಳನ್ನು ಗುಂಡಿಟ್ಟು ಕೊಲ್ಲುವುದೊಂದೇ ಪರಿಹಾರವಲ್ಲ ಎಂಬುದನ್ನು ಮನಗಂಡು ಪರ್ಯಾಯ ಪರಿಹಾರ ಮಾರ್ಗಗಳನ್ನು ಹುಡುಕಬೇಕು.

ಕಾಡಿನಲ್ಲಿ ಮಾನವನ ಅತಿಯಾದ ಹಸ್ತಕ್ಷೇಪವನ್ನು ಕಡಿಮೆ ಮಾಡುವುದು ಇದರಲ್ಲಿ ಮುಖ್ಯವಾದುದು. ಆಹಾರ ಸರಪಳಿಯಲ್ಲಿ ಸಮತೋಲನ ಕಾಪಾಡುವುದು, ಅರಣ್ಯ ಪ್ರದೇಶಗಳಲ್ಲಿ ಗಣಿಗಾರಿಕೆಯಂತಹ ಚಟುವಟಿಕೆಗಳನ್ನು ನಿರ್ಬಂಧಿಸುವುದು, ಕಾಳ್ಗಿಚ್ಚಿಗೆ ಕಡಿವಾಣ, ಕಾಡುಪ್ರಾಣಿಗಳಿಗೆ ಪ್ರತ್ಯೇಕ ಕಾರಿಡಾರ್ ವ್ಯವಸ್ಥೆ ಸೇರಿದಂತೆ ವಿವಿಧ ಯೋಜನೆಗಳನ್ನು ರೂಪಿಸಿ ಕಟ್ಟುನಿಟ್ಟಾಗಿ ಜಾರಿಗೆ ತರಬೇಕು.

–ಮುರುಗೇಶ ಡಿ., ದಾವಣಗೆರೆ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT