ಶನಿವಾರ, ಅಕ್ಟೋಬರ್ 1, 2022
20 °C

ಕೌನ್ಸೆಲಿಂಗ್‌ ವ್ಯವಸ್ಥೆ ಪುನಃ ಜಾರಿಯಾಗಲಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಈ ಹಿಂದೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಸಿಬ್ಬಂದಿಯ ವರ್ಗಾವಣೆಯನ್ನು ಕೌನ್ಸೆಲಿಂಗ್ ಮೂಲಕವೇ ಮಾಡಲಾಗುತ್ತಿತ್ತು. ಅದು, ಹಿರಿಯ ಅಧಿಕಾರಿಯೊಬ್ಬರ ಪ್ರಾಮಾಣಿಕ ಪ್ರಯತ್ನದ ಫಲ. ಕೆಲವೊಂದು ನಿರ್ದಿಷ್ಟ ಮಾರ್ಗಸೂಚಿಗಳನ್ನು ಮೊದಲೇ ಪ್ರಚುರಪಡಿಸಿ, ಖಾಲಿ ಇರುವ ಸ್ಥಳಗಳನ್ನು ಇಲಾಖೆಯ ವೆಬ್‌ಸೈಟಿನಲ್ಲಿ ಮೊದಲೇ ಪ್ರಕಟಿಸಿ, ಯಾವುದೇ ಅನುಮಾನಕ್ಕೆ ಆಸ್ಪದ ಇಲ್ಲದಂತೆ ನೋಡಿಕೊಳ್ಳಲಾಗುತ್ತಿತ್ತು. ಎಲ್ಲಾ ಹಂತದ ಸಿಬ್ಬಂದಿಗೆ ಇದೇ ವ್ಯವಸ್ಥೆಯನ್ನು ಅನುಸರಿಸಲಾಗುತ್ತಿತ್ತು. ಸಿಬ್ಬಂದಿಯ ಬಡ್ತಿಗೂ ಪಾರದರ್ಶಕ ವ್ಯವಸ್ಥೆ ಇತ್ತು. ಇದರಿಂದಾಗಿ ಭ್ರಷ್ಟಾಚಾರ, ವಶೀಲಿ ಮತ್ತು ಅವ್ಯವಹಾರಕ್ಕೆ ಅವಕಾಶ ಇರಲಿಲ್ಲ. ಎಲ್ಲರೂ ಇದಕ್ಕೆ ಹೊಂದಿಕೊಂಡು ನಿರಾಳವಾಗಿದ್ದರು.

ಆದರೆ ಎರಡು– ಮೂರು ವರ್ಷಗಳಿಂದ ಇಲಾಖೆಯಲ್ಲಿ ವರ್ಗಾವಣೆ ಮತ್ತು ಬಡ್ತಿಯ ಚಿತ್ರಣ ಸಂಪೂರ್ಣ ಬದಲಾಗಿದೆ. ಕೌನ್ಸೆಲಿಂಗ್ ವ್ಯವಸ್ಥೆಗೆ ಎಳ್ಳುನೀರು ಬಿಡಲಾಗಿದೆ. ವರ್ಗಾವಣೆಯ ನಿರೀಕ್ಷೆಯಲ್ಲಿರುವ ಸಿಬ್ಬಂದಿಯ ತಳಮಳ ಹೇಳತೀರದು. ಪಾರದರ್ಶಕವಾಗಿದ್ದ ಕೌನ್ಸೆಲಿಂಗ್ ವ್ಯವಸ್ಥೆಯನ್ನು ಪುನಃ ಜಾರಿಗೆ ತರುವುದರಿಂದ ಈ ಬಗೆಯ ಅನಗತ್ಯ ತಳಮಳಗಳನ್ನು ನಿವಾರಿಸಬಹುದು.

–ನಿರ್ಮಲಕುಮಾರ, ಶಿವಮೊಗ್ಗ

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.