ಶನಿವಾರ, ಫೆಬ್ರವರಿ 29, 2020
19 °C

ರೋಗಿಗಳು ಬಲಿಪಶುಗಳಾಗದಿರಲಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ದಾವಣಗೆರೆಯ ಚಿಗಟೇರಿ ಜಿಲ್ಲಾ ಆಸ್ಪತ್ರೆಯಲ್ಲಿ ಸಕಾಲಕ್ಕೆ ವೆಂಟಿಲೇಟರ್ ಸೌಕರ್ಯ ಸಿಗದೆ ಗರ್ಭಿಣಿಯೊಬ್ಬರು ಸಾವನ್ನಪ್ಪಿರುವುದು (ಪ್ರ.ವಾ., ಫೆ. 5) ವಿಷಾದಕರ ಸಂಗತಿ. ಆಸ್ಪತ್ರೆಯಲ್ಲಿ ವೆಂಟಿಲೇಟರ್‌ಗಳ ಸಮಸ್ಯೆ ಇದೆ ಎಂದು ಗೊತ್ತಿದ್ದರೂ ಅದನ್ನು ಆದ್ಯತೆಯ ಮೇಲೆ ಸರಿಪಡಿಸಿಕೊಳ್ಳದೇ ಇದ್ದುದು ಖಂಡನೀಯ.‌

ಸರ್ಕಾರಿ ಆಸ್ಪತ್ರೆಗಳಲ್ಲಿ ಮೂಲ ಸೌಕರ್ಯ ಕೊರತೆ ನೀಗಿಸುವುದು ಸರ್ಕಾರಕ್ಕೆ ಆದ್ಯತೆಯಾಗಬೇಕು. ವಾರ್ಡ್‌ಗಳಲ್ಲಿ ಸಾಮಾನ್ಯವಾಗಿ ಸ್ವಚ್ಛತೆಯ ಕೊರತೆ ಎದ್ದು ಕಾಣುತ್ತದೆ. ಸರ್ಕಾರ ಅನುದಾನ ಕೊಟ್ಟರೂ ಅದು ಪರಿಣಾಮಕಾರಿಯಾಗಿ ಮತ್ತು ಸಮರ್ಪಕವಾಗಿ ಬಳಕೆಯಾಗುತ್ತಿಲ್ಲ ಎಂಬ ದೂರುಗಳು ಇವೆ. ಇಂತಹ ಕಾರಣಗಳಿಗೆ ರೋಗಿಗಳು ಬಲಿಪಶು ಆಗದಿರಲಿ.

–ಚಂದ್ರಶೇಖರ, ದಾವಣಗೆರೆ

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು