ಸೋಮವಾರ, ಜೂನ್ 14, 2021
28 °C

ಪಿಯುಸಿ ಅಂಕ ಆಧರಿಸಿ ಸೀಟ್‌ ಹಂಚಿಕೆಯಾಗಲಿ

ವಾಚಕರ ವಾಣಿ Updated:

ಅಕ್ಷರ ಗಾತ್ರ : | |

ಸಿಇಟಿಯನ್ನು ಇದೇ 30 ಮತ್ತು 31ರಂದು ನಡೆಸಲು ನಿರ್ಧರಿಸಲಾಗಿದೆ. ರಾಜ್ಯದಲ್ಲಿ ಆ ವೇಳೆಗೆ ಕೊರೊನಾ ಸೋಂಕಿನ ಪರಿಸ್ಥಿತಿ ಏನಾಗಿರುತ್ತದೆ ಎಂಬುದು ನಿರೀಕ್ಷೆಗೆ ನಿಲುಕದ ಸಂಗತಿ. ಎಸ್‌ಎಸ್‌ಎಲ್‌ಸಿ ಪರೀಕ್ಷೆಯನ್ನು ಸರ್ಕಾರ ಇತ್ತೀಚೆಗೆ ಯಶಸ್ವಿಯಾಗಿ ನಡೆಸಿತು. ಎಸ್‌ಎಸ್‌ಎಲ್‌ಸಿ ನಂತರದ ಶಿಕ್ಷಣಕ್ಕೆ ಅರ್ಹ ವಿದ್ಯಾರ್ಥಿಗಳನ್ನು ಗುರುತಿಸಲು ಈ ಪರೀಕ್ಷೆ ನಡೆಸಬೇಕಾಯಿತು ಎಂಬುದನ್ನು ಎಲ್ಲರೂ ಒಪ್ಪುತ್ತಾರೆ.

ಪಿಯುಸಿ ಪರೀಕ್ಷೆ ಈಗ ಮುಗಿದಿದೆ. ಪಿಯುಸಿ ಅಂಕಗಳ ಆಧಾರದ ಮೇಲೆ ಅಥವಾ ಸಿಬಿಎಸ್‌ಇಯಂತಹ ಯಾವುದೇ ಮಂಡಳಿಯ ಅಂಕಗಳ ಆಧಾರದ ಮೇಲೆ ವಿದ್ಯಾರ್ಥಿಗಳಿಗೆ ವಿವಿಧ ಕೋರ್ಸ್‌ಗಳಿಗೆ ಸೀಟುಗಳನ್ನು ಹಂಚಲು ಸಿಇಟಿ ಸೆಲ್‌ ಕ್ರಮ ತೆಗೆದುಕೊಳ್ಳಬೇಕು. ಕೊರೊನಾ ಸೋಂಕು ಹರಡುವಿಕೆಯ ಭೀತಿ ಇರುವಾಗ ಇಂತಹದೊಂದು ಉಪಕ್ರಮ ಅಗತ್ಯ. ಇದರಿಂದ ಪೋಷಕರು ಮತ್ತು ವಿದ್ಯಾರ್ಥಿಗಳು ಮಾತ್ರವಲ್ಲದೆ ಸರ್ಕಾರಿ ಸಿಬ್ಬಂದಿ ಸಹ ನೆಮ್ಮದಿಯ ನಿಟ್ಟುಸಿರು ಬಿಡುವಂತೆ ಆಗುತ್ತದೆ. 

- ಡಾ. ಉದಯ ಕುಮಾರ್‌, ಬೆಂಗಳೂರು

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು