ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಿಯುಸಿ ಮೌಲ್ಯಮಾಪನ ವಿಕೇಂದ್ರೀಕರಣಗೊಳ್ಳಲಿ

Last Updated 5 ಜೂನ್ 2020, 20:00 IST
ಅಕ್ಷರ ಗಾತ್ರ

ರಾಜ್ಯದಲ್ಲಿ ಕೊರೊನಾ ಸೋಂಕು ವ್ಯಾಪಕವಾಗಿ ಹಬ್ಬುತ್ತಿದೆ. ಇಂತಹ ಗಂಭೀರ ಪರಿಸ್ಥಿತಿಯಲ್ಲಿ ಸರ್ಕಾರವು ಅಪಾಯದ ಮುನ್ಸೂಚನೆಯನ್ನು ಅರಿಯದೆ ಎಲ್ಲ ಜಿಲ್ಲೆಗಳ, ವಿಜ್ಞಾನ ವಿಷಯದ ನೂರಾರು ಉಪನ್ಯಾಸಕರನ್ನು ಬೆಂಗಳೂರಿನಲ್ಲಿ ಸೇರಿಸಿ, 8 ಕೇಂದ್ರಗಳಲ್ಲಿ ಪಿಯುಸಿ ಉತ್ತರ ಪತ್ರಿಕೆಗಳ ಮೌಲ್ಯಮಾಪನಕ್ಕೆ ಮುಂದಾಗಿದೆ. ಈ ಉಪನ್ಯಾಸಕರು ಒಂದೇ ಕಟ್ಟಡದಲ್ಲಿ ಮೌಲ್ಯಮಾಪನ ಮಾಡಬೇಕಿರುತ್ತದೆ. ಅಂತರ ಕಾಯ್ದುಕೊಳ್ಳುವುದು ಕಷ್ಟಸಾಧ್ಯ.

ರಾಜ್ಯದ ಬೇರೆ ಬೇರೆ ಭಾಗಗಳಿಂದ ಉಪನ್ಯಾಸಕರು ಬರುವುದರಿಂದ ಕೊರೊನಾ ಸೋಂಕು ಹರಡುವ ಸಾಧ್ಯತೆ ಇರುತ್ತದೆ. ಒಂದು ವೇಳೆ ಯಾರಾದರೂ ಒಬ್ಬರಲ್ಲಿ ಕೊರೊನಾ ಪಾಸಿಟಿವ್ ಕಾಣಿಸಿಕೊಂಡಲ್ಲಿ ಶಿಬಿರವನ್ನು ಸೀಲ್‌ಡೌನ್ ಮಾಡಿ, ಉಪನ್ಯಾಸಕರನ್ನು ಕ್ವಾರಂಟೈನ್‌ಗೆ ಒಳಪಡಿಸಬೇಕಾಗುವ ಸಂಭವವಿರುತ್ತದೆ. ಆದ್ದರಿಂದ ಸರ್ಕಾರವು ಮೌಲ್ಯಮಾಪನ ಕೇಂದ್ರಗಳನ್ನು ವಿವಿಧ ಜಿಲ್ಲಾ ಕೇಂದ್ರಗಳಲ್ಲಿ ವಿಕೇಂದ್ರೀಕರಣಗೊಳಿಸುವ ಮೂಲಕ ಮೌಲ್ಯಮಾಪನ ಕಾರ್ಯವನ್ನು ಸುಗಮಗೊಳಿಸಬೇಕು. ವಿದ್ಯಾರ್ಥಿಗಳ ಹಿತಾಸಕ್ತಿ ಮತ್ತು ಉಪನ್ಯಾಸಕರ ಆರೋಗ್ಯವನ್ನು ಕಾಪಾಡಬೇಕು.

–ಎಲ್.ಎನ್.ಮುಕುಂದರಾಜ್, ಬೆಂಗಳೂರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT