ವಾಚಕರ ವಾಣಿ | ಸುಂಕ ಕಡಿತ ಸ್ವಾಗತಾರ್ಹ: ರಾಜ್ಯವೂ ಅನುಸರಿಸಲಿ
ಕೇಂದ್ರ ಸರ್ಕಾರವು ಪೆಟ್ರೋಲ್, ಡೀಸೆಲ್ ಮೇಲಿನ ಎಕ್ಸೈಸ್ ಸುಂಕವನ್ನು ಕಡಿತ ಮಾಡಿರುವುದು ಸ್ವಾಗತಾರ್ಹ. ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಏರಿಕೆಯಿಂದ ದಿನನಿತ್ಯ ಬಳಸುವ ವಸ್ತುಗಳ ಬೆಲೆ ಗಗನಕ್ಕೇರಿದ್ದು, ಇದರಿಂದ ಜನಸಾಮಾನ್ಯರ ಬದುಕು ದುಸ್ತರವಾಗಿದೆ. ಕೇಂದ್ರದ ಈ ನಿರ್ಧಾರದಿಂದ ದರ ತುಸು ಇಳಿಕೆಯಾಗಿದೆ. ಇದರಿಂದಾಗಿ ಸಾರ್ವಜನಿಕರಲ್ಲಿ ಕೊಂಚ ನಿರಾಳ ಭಾವ ಮೂಡಿದೆ. ಆದರೂ ಪೈಸೆ ಪೈಸೆಗಳ ಮಟ್ಟದಲ್ಲಿ ತಿಂಗಳುಗಟ್ಟಲೆ ಪೆಟ್ರೋಲ್ ಹಾಗೂ ಡೀಸೆಲ್ ದರ ಏರಿಸಿದ ಬಳಿಕ ಈಗ ಸುಂಕದಲ್ಲಿ ಕಡಿತ ಮಾಡಿದರೇನು ಬಂತು ಎಂದು ಕೆಲವರು ಟೀಕಿಸುತ್ತಿದ್ದಾರೆ. ಬೆಲೆ ಏರಿಕೆಯಾದಾಗ ಟೀಕಿಸುವುದು ಸಹಜ ನಡಾವಳಿ. ಅದೇ ರೀತಿ ಸುಂಕ ಕಡಿತಗೊಳಿಸಿದಾಗ ಅಭಿನಂದಿಸುವುದು ಸೌಜನ್ಯ.
ರಾಜ್ಯ ಸರ್ಕಾರ ಕೂಡ ತನ್ನ ವ್ಯಾಪ್ತಿಯಲ್ಲಿ ಕರಭಾರ ಕಡಿಮೆ ಮಾಡಿ ಜನಸಾಮಾನ್ಯರ ಬದುಕು ಮತ್ತಷ್ಟು ಹಗುರವಾಗಲು ನೆರವಾಗಬೇಕು.
–ಹರಳಹಳ್ಳಿ ಪುಟ್ಟರಾಜು, ಪಾಂಡವಪುರ
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.