ಮಂಗಳವಾರ, ಅಕ್ಟೋಬರ್ 4, 2022
25 °C

ಹುಳುಕು ಹೊರಬೀಳುವ ಅಂಜಿಕೆಯೇ?

ವಾಚಕರ ವಾಣಿ Updated:

ಅಕ್ಷರ ಗಾತ್ರ : | |

ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ‘ಬಿಜೆಪಿ ನೇತೃತ್ವದ ಸರ್ಕಾರವು 40 ಪರ್ಸೆಂಟ್‌ ಕಮಿಷನ್ ಸರ್ಕಾರ’ ಎಂದು ವಾಗ್ದಾಳಿ ನಡೆಸಿದ್ದಾರೆ. ಇದಕ್ಕೆ ಪ್ರತಿಯಾಗಿ ಆಡಳಿತ ಪಕ್ಷದ ಸಚಿವರು ‘ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ಸಮಯದಲ್ಲಿ ಭ್ರಷ್ಟಾಚಾರ ನಡೆದೇ ಇರಲಿಲ್ಲವೆ’ ಎಂದು ಕುಟುಕಿದ್ದಾರೆ. ಇದು ಒಂದು ರೀತಿಯಲ್ಲಿ ‘ನೀನು ಹೊಡೆದಂಗೆ ಮಾಡು, ನಾನು ಅತ್ತಂಗೆ ಮಾಡುತ್ತೇನೆ’ ಎನ್ನುವ ಹಾಗಿದೆ. ಇವರದೇ ಬಹುಮತದ ಸರ್ಕಾರವಿದ್ದೂ, ಹಿಂದಿನ ಸರ್ಕಾರದಲ್ಲಿ ನಡೆದಿದೆ ಎನ್ನಲಾದ ಭ್ರಷ್ಟಾಚಾರದ ಆರೋಪಗಳ ಬಗ್ಗೆ ತನಿಖೆ ಮಾಡುವ ತಾಕತ್ತು ಇಲ್ಲವೇ? ಹಾಗೆ ಮಾಡಿದರೆ ಇವರ ಹುಳುಕು ಹೊರಬೀಳುತ್ತದೆ
ಎಂಬ ಅಂಜಿಕೆಯೇ?

-ಅನಂತ ಪದ್ಮನಾಭ ಎಚ್.ಎಮ್., ಬೆಂಗಳೂರು

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು