ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಾಚಕರ ವಾಣಿ| ಸರ್ಕಾರಿ ಆಸ್ಪತ್ರೆ ಅಪಥ್ಯವೇಕೆ?

Last Updated 2 ಡಿಸೆಂಬರ್ 2022, 19:31 IST
ಅಕ್ಷರ ಗಾತ್ರ

ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಅನಾರೋಗ್ಯದಿಂದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ರಾಜಕಾರಣಿಗಳಿಗೂ ಅಧಿಕಾರಿಗಳಿಗೂ ಸರ್ಕಾರಿ ಆಸ್ಪತ್ರೆಯೆಂದರೆ ಅಪಥ್ಯವೇಕೆ? ಸರ್ಕಾರಿ ಆಸ್ಪತ್ರೆಗಳಲ್ಲಿ ಸರಿಯಾದ ಚಿಕಿತ್ಸೆ ದೊರೆಯುವುದಿಲ್ಲ ಎಂಬ ಭಾವವೇ? ಅದೇ ನಿಜವಾದರೆ ಆ ಕೊರತೆಯನ್ನು ಸರಿಪಡಿಸಬೇಕಾದದ್ದು ಅವರ ಕರ್ತವ್ಯವಲ್ಲವೇ? ಸರ್ಕಾರಿ ಆಸ್ಪತ್ರೆಗಳು ಇರುವುದು ಬಡವರಿಗೆ ಮಾತ್ರವೇ? ಸರಿಯಾದ ಚಿಕಿತ್ಸೆ ದೊರೆಯದೆ ಬಡವರ ಜೀವ ಅಪಾಯಕ್ಕೆ ಸಿಲುಕಬೇಕೆ?

ಅಧಿಕಾರಿಗಳು ಮತ್ತು ರಾಜಕಾರಣಿಗಳು ಅನಾರೋಗ್ಯಕ್ಕೆ ಈಡಾದಾಗ ಸರ್ಕಾರಿ ಆಸ್ಪತ್ರೆಗೆ ದಾಖಲಾದರೆ ಅಲ್ಲಿನ ಅವ್ಯವಸ್ಥೆಗಳನ್ನು ಕಂಡು ಸರಿಪಡಿಸಬಹುದು. ಈ ದಿಸೆಯಲ್ಲಿ ಇದು ಒಂದು ರೀತಿಯಲ್ಲಿ ಅಪೂರ್ವ ಅವಕಾಶ ಎಂದರೆ ತಪ್ಪಲ್ಲ. ಗಿರಿನಾಥ್‌ ಅವರು ಸರ್ಕಾರಿ ಆಸ್ಪತ್ರೆಗೆ ದಾಖಲಾಗುವ ಮೂಲಕ ಮಾದರಿಯಾಗಬಹುದಿತ್ತು.

ಪತ್ತಂಗಿ ಎಸ್. ಮುರಳಿ,ಬೆಂಗಳೂರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT