ವಾಚಕ ವಾಣಿ| ಹೀಗಿದೆ ನಮ್ಮ ನಾಯಕರ ಇಚ್ಛಾಶಕ್ತಿ!
ಕರ್ನಾಟಕ ಹಾಗೂ ಮಹಾರಾಷ್ಟ್ರ ಗಡಿ ವಿವಾದ ಇದೀಗ ಮತ್ತೆ ಮುನ್ನೆಲೆಗೆ ಬಂದಿದೆ. ಈ ಸಂದರ್ಭದಲ್ಲಿ, ‘25 ವರ್ಷಗಳ ಹಿಂದೆ’ ಅಂಕಣ (ಪ್ರ.ವಾ., ನ. 26) ಗಮನ ಸೆಳೆಯುವಂತಿದೆ. ಅಂದು ಕರ್ನಾಟಕದ ಮುಖ್ಯಮಂತ್ರಿ
ಯಾಗಿದ್ದ ಜೆ.ಎಚ್.ಪಟೇಲ್ ಹಾಗೂ ಮಹಾರಾಷ್ಟ್ರದ ಮುಖ್ಯಮಂತ್ರಿಯಾಗಿದ್ದ ಮನೋಹರ ಜೋಷಿ ಅವರು ಮುಂಬೈನಲ್ಲಿ ಜಂಟಿ ಪತ್ರಿಕಾಗೋಷ್ಠಿ ನಡೆಸಿ, ಆಗಿನ ಕಾಲಕ್ಕೆ ನಾಲ್ಕು ದಶಕಗಳಷ್ಟು ಹಿಂದಿನದಾಗಿದ್ದ ಗಡಿ ವಿವಾದವನ್ನು ಮಾತುಕತೆಯ ಮೂಲಕ ಶೀಘ್ರವಾಗಿ ಪರಿಹರಿಸಿಕೊಳ್ಳಬೇಕೆಂಬ ಇಂಗಿತವನ್ನು ವ್ಯಕ್ತಪಡಿಸಿದ್ದರು. ಹೇಗಿದೆ ನೋಡಿ ಸಮಸ್ಯೆ ಪರಿಹರಿಸುವಲ್ಲಿ ರಾಜಕೀಯ ನಾಯಕರ ಇಚ್ಛಾಶಕ್ತಿ!
- ಎ.ವಿ.ಮುರಳೀಧರ ಆಚಾರ್ಯ, ಬೆಂಗಳೂರು
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.