ಮಂಗಳವಾರ, ಫೆಬ್ರವರಿ 25, 2020
19 °C

ಹಳೆಯ ವಿದ್ಯಮಾನ ನೆನಪಾಗಲಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಪ್ರಧಾನಿ ನರೇಂದ್ರ ಮೋದಿಯವರು ರಾಜ್ಯದ ಇತ್ತೀಚಿನ ಉಪಚುನಾವಣೆಯಲ್ಲಿ ಬಿಜೆಪಿಗೆ ಹೆಚ್ಚು ಸ್ಥಾನಗಳನ್ನು ತಂದುಕೊಟ್ಟಿರುವ ಫಲಿತಾಂಶದ ಬಗ್ಗೆ ಮಾತನಾಡುತ್ತ, ‘ಹಿಂಬಾಗಿಲಿನಿಂದ ಅಧಿಕಾರ ಹಿಡಿಯಲು ಪ್ರಯತ್ನಿಸಿದವರಿಗೆ ಉಪಚುನಾವಣೆಯಲ್ಲಿ ಜನ ಸರಿಯಾದ ಪಾಠ ಕಲಿಸಿದ್ದಾರೆ’ ಎಂದೂ, ಜಾರ್ಖಂಡ್‌ನಲ್ಲಿ ಚುನಾವಣಾ ಪ್ರಚಾರದಲ್ಲಿ ಮಾತನಾಡುತ್ತಾ, ‘ಕರ್ನಾಟಕದ ವಿಧಾನಸಭೆಗೆ ನಡೆದ ಚುನಾವಣೆಯಲ್ಲಿ ನಮಗೆ ಹೆಚ್ಚು ಸ್ಥಾನಗಳು ಲಭಿಸಿದ್ದವು. ಆದರೆ ಕಾಂಗ್ರೆಸ್- ಜೆಡಿಎಸ್ ಒಟ್ಟಾಗಿ, ನಮ್ಮನ್ನು ಸರ್ಕಾರ ರಚಿಸುವುದರಿಂದ ತಡೆದವು. ಪ್ರಜಾಪ್ರಭುತ್ವದಲ್ಲಿ ಮತದಾರರ ತೀರ್ಮಾನವೇ ಅಂತಿಮ ಎಂಬುದನ್ನು ಉಪಚುನಾವಣೆ ಫಲಿತಾಂಶ ಸ್ಪಷ್ಟಪಡಿಸಿದೆ’ ಎಂದೂ ಹೇಳಿದ್ದಾರೆ (ಪ್ರ.ವಾ., ಡಿ. 10).

ಆದರೆ, ಈ ಹಿಂದೆ ಗೋವಾದಲ್ಲಿ ಏನಾಯಿತು ಎಂಬುದನ್ನು ಮೋದಿಯವರು ಮರೆತಿರಬಹುದು. ಬಿಜೆಪಿ ಅಲ್ಲಿ ಮುಂಬಾಗಿಲಿನಿಂದ ಅಧಿಕಾರ ಹಿಡಿಯಿತೇ? ರಾಜ್ಯದಲ್ಲೂ ಅಷ್ಟೆ, ಇತರ ಪಕ್ಷದವರನ್ನು ಆಮಿಷಗಳ ಮೂಲಕ ಸೆಳೆದು, ಅವರ ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಡಿಸಿ, ಉಪಚುನಾವಣೆಯಲ್ಲಿ ಕುರುಡು ಕಾಂಚಾಣದ ಹೊಳೆ ಹರಿಸಿದ ನಗ್ನಸತ್ಯ ಜನರ ಮುಂದಿದೆ. ಈ ವಿದ್ಯಮಾನಗಳನ್ನು ಪ್ರಧಾನಿ ನೆನಪಿಸಿಕೊಳ್ಳಲಿ.

- ಪ್ರಕಾಶ್, ಹೊಸನಗರ

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು