ಶುಕ್ರವಾರ, ಜನವರಿ 27, 2023
17 °C

ವಾಚಕರ ವಾಣಿ| ಶಾಲೆಗಳಿಗೆ ಸೌಲಭ್ಯ: ಸಮರೋಪಾದಿಯಲ್ಲಿ ಒದಗಿಸಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಶಾಲೆಗಳಲ್ಲಿ ಕುಡಿಯುವ ನೀರು ಎಷ್ಟು ಮುಖ್ಯವೋ ಅಷ್ಟೇ ಮುಖ್ಯ ಶೌಚಾಲಯ ವ್ಯವಸ್ಥೆ ಎಂದು ಡಾ. ಕೆ.ಎಸ್‌.ಚೈತ್ರಾ ಅಭಿಪ್ರಾಯಪಟ್ಟಿದ್ದಾರೆ (ಸಂಗತ, ನ. 25). ಸ್ವಾತಂತ್ರ್ಯ ಬಂದು 75 ವರ್ಷಗಳಾದರೂ ನಮ್ಮ ಎಷ್ಟೋ ಸರ್ಕಾರಿ ಶಾಲೆಗಳಲ್ಲಿ ಕುಡಿಯುವ ನೀರು, ಶೌಚಾಲಯ ವ್ಯವಸ್ಥೆ ಇಲ್ಲದಿರುವುದು ನಾಚಿಕೆಗೇಡು. ಹೆಣ್ಣುಮಕ್ಕಳು ಶೌಚಕ್ಕೆ ಹೋಗಲು ಅನುಭವಿಸುತ್ತಿರುವ ತೊಂದರೆ ಹೇಳತೀರದು. ಕೆಲವು ಶಾಲೆಗಳಲ್ಲಿ ಶೌಚಾಲಯ ಇದ್ದರೂ ನೀರಿನ ಸೌಲಭ್ಯ ಇಲ್ಲದೆ ಅವು ಗಬ್ಬು ನಾರುತ್ತಿರುತ್ತವೆ. ಶಾಲೆಗಳಿಗೆ ಕುಡಿಯುವ ನೀರು ಹಾಗೂ ಶೌಚಾಲಯ ವ್ಯವಸ್ಥೆ ಕಲ್ಪಿಸುವ ಬಗ್ಗೆ ಸರ್ಕಾರ ಸಮರೋಪಾದಿಯಲ್ಲಿ ಯೋಜನೆ ರೂಪಿಸಿ ಅನುಷ್ಠಾನ ಮಾಡಲಿ.

-  ಡಾ. ಎಚ್.ಆರ್‌.ಪ್ರಕಾಶ್, ಕೆ.ಬಿ.ದೊಡ್ಡಿ, ಮಂಡ್ಯ

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು