ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಲ್ಲಿದ್ದಲು ಉತ್ಪಾದನೆ ಗುರಿ ಪರಾಮರ್ಶೆ

Last Updated 6 ಏಪ್ರಿಲ್ 2018, 19:30 IST
ಅಕ್ಷರ ಗಾತ್ರ

ನವದೆಹಲಿ : ಕೇಂದ್ರ ಸರ್ಕಾರವು ಕಲ್ಲಿದ್ದಲು ಉತ್ಪಾದನೆ ಗುರಿಯನ್ನು ಮರುಪರಿಶೀಲನೆ ಮಾಡುವ ಸಾಧ್ಯತೆ ಇದೆ.

2019–2020ರ ಒಳಗೆ 100 ಕೋಟಿ ಟನ್‌ ಕಲ್ಲಿದ್ದಲು ಉತ್ಪಾದನೆ ಗುರಿಯನ್ನು ಸರ್ಕಾರ ಪ್ರಕಟಿಸಿದೆ. ಆದರೆ, ಸದ್ಯದ ಪರಿಸ್ಥಿತಿ ಗಮನಿಸಿದರೆ ಅಷ್ಟು ಪ್ರಮಾಣದ ಕಲ್ಲಿದ್ದಲು ಅಗತ್ಯ ಇಲ್ಲ ಎಂದು ಸರ್ಕಾರ ನಿರ್ಧರಿಸಿದೆ.

‘ಕಲ್ಲಿದ್ದಲು ಲಭ್ಯತೆ ಮತ್ತು ಉತ್ಪಾದನೆಯ ಬಗ್ಗೆ ಅಧ್ಯಯನ ನಡೆಸಿ ವರದಿ ನೀಡುವಂತೆ ಕೆಪಿಎಂಜಿ ಸಂಸ್ಥೆಯನ್ನು ನಿಯೋಜಿಸಲಾಗಿತ್ತು. ಅದರ ಶಿಫಾರಸು ಬಂದ ಬಳಿಕ 100 ಕೋಟಿ ಟನ್‌ ಕಲ್ಲಿದ್ದಲು ಉತ್ಪಾದನೆ ಮಾಡುವ ಅಗತ್ಯ ಇದೆಯೇ ಎನ್ನುವ ಪ್ರಶ್ನೆ ಎದುರಾಗಿದೆ’ ಎಂದು ಕಲ್ಲಿದ್ದಲು ಕಾರ್ಯದರ್ಶಿ ಸುಶೀಲ್‌ ಕುಮಾರ್ ತಿಳಿಸಿದ್ದಾರೆ.

ಯಾವಾಗ ಅಷ್ಟು ಪ್ರಮಾಣದ ಕಲ್ಲಿದ್ದಲಿನ ಅಗತ್ಯ ಬೀಳಲಿದೆ ಮತ್ತು ಯಾವ ಸಂದರ್ಭದಲ್ಲಿ ಕೋಲ್ ಇಂಡಿಯಾ (ಸಿಐಎಲ್‌) ಅದನ್ನು ಉತ್ಪಾದನೆ ಮಾಡಬೇಕು ಎನ್ನುವುದನ್ನು ನಿರ್ಧರಿಸಲಾಗುವುದು ಎಂದು ಅವರು ಹೇಳಿದ್ದಾರೆ.

ದೇಶದಲ್ಲಿ ಉತ್ಪಾದನೆ ಆಗುತ್ತಿರುವ ಕಲ್ಲಿದ್ದಲಿನಲ್ಲಿ ಕೋಲ್‌ ಇಂಡಿಯಾದ ಪಾಲು ಶೇ 80 ರಷ್ಟಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT