ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮರಾಠಿ ಭಾಷಿಕರ ಕ್ಷಮೆ ಕೇಳಿದ್ದು ಅಕ್ಷಮ್ಯ ಅಪರಾಧ

ಸಿದ್ದರಾಮಯ್ಯ ನಡೆಗೆ ಯಡಿಯೂರಪ್ಪ ಟೀಕೆ
Last Updated 29 ಏಪ್ರಿಲ್ 2018, 6:26 IST
ಅಕ್ಷರ ಗಾತ್ರ

ಕಲಬುರ್ಗಿ: ಚಿಕ್ಕೋಡಿ ತಾಲ್ಲೂಕು ಬೇಡಕಿಹಾಳ ಗ್ರಾಮದಲ್ಲಿ ಆಯೋಜಿಸಿದ್ದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮರಾಠಿ ಭಾಷಿಕರ ಕ್ಷಮೆ ಕೇಳಿದ್ದು ಅಕ್ಷಮ್ಯ ಅಪರಾಧ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿದರು.

ನಗರದಲ್ಲಿ ಭಾನುವಾರ ತಮ್ಮನ್ನು ಭೇಟಿ ಮಾಡಿದ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಕ್ಷಮೆಯಾಚಿಸುವ ಮೂಲಕ ಕನ್ನಡಿಗರಿಗೆ ಅಪಮಾನ ಮಾಡಿದ್ದಾರೆ. ಆದ್ದರಿಂದ ಅವರು ಕನ್ನಡಿಗರ ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿದರು.

ಮರಾಠಿಗರೂ ನಮ್ಮವರೆ. ಎಲ್ಲರೊಂದಿಗೆ ಬಾಂಧವ್ಯದಿಂದ ಇದ್ದಾರೆ. ಹಾಗಂತ ಮುಖ್ಯಮಂತ್ರಿ ಆದವರು ಕ್ಷಮೆ ಕೇಳುವುದು ಸರಿಯಲ್ಲ ಎಂದರು.

ಸಿದ್ದರಾಮಯ್ಯ ತಲೆ ತಿರುಕ. ಆತನಿಗೆ ತಲೆ ಸರಿ ಇಲ್ಲ. ತಲೆ ತಿರುಕರು ಇನ್ನೇನು ಮಾತನಾಡಲು ಸಾಧ್ಯ. ಸಿದ್ದರಾಮಯ್ಯ ಕಾಂಗ್ರೆಸ್ ಸರ್ಕಾರದ ಕೊನೆಯ ಮುಖ್ಯಮಂತ್ರಿ. ಸ್ಪಷ್ಟ ಬಹುಮತದೊಂದಿಗೆ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT