ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಾತೇ ಮುಳ್ಳು...?

ಯಾರು?
Last Updated 30 ಅಕ್ಟೋಬರ್ 2018, 20:00 IST
ಅಕ್ಷರ ಗಾತ್ರ

‘ನರೇಂದ್ರ ಮೋದಿ, ಆರ್‌ಎಸ್‌ಎಸ್‌ ಪಾಲಿಗೆ ಶಿವಲಿಂಗದ ಮೇಲೆ ಕುಳಿತ ಚೇಳಿನಂತಿದ್ದಾರೆ’ ಎಂದು ಕಾಂಗ್ರೆಸ್ ನಾಯಕ ಶಶಿ ತರೂರ್ ಅವರು ಬೆಂಗಳೂರು ಸಾಹಿತ್ಯೋತ್ಸವದಲ್ಲಿ ಮಾತನಾಡುತ್ತಾ ವಿಶ್ಲೇಷಣೆ ಮಾಡಿದ್ದಾರೆ.

ಇನ್ನೊಂದೆಡೆ ಕಾಂಗ್ರೆಸ್ ಶಾಸಕಿ ಪ್ರಣೀತ್ ಶಿಂಧೆ ಅವರು ಕಾಂಗ್ರೆಸ್ ಸಮಾವೇಶವೊಂದರಲ್ಲಿ, ‘ಮೋದಿ ಡೆಂಗಿ ಜ್ವರಕ್ಕೆ
ಕಾರಣವಾಗುವ ಸೊಳ್ಳೆ ಇದ್ದಂತೆ’ ಎಂದಿದ್ದಾರೆ. ನಿರೀಕ್ಷೆಯಂತೆ ಬಿಜೆಪಿಯ ನಾಯಕರು ಈ ಎರಡೂ ಹೇಳಿಕೆಗಳಿಗೆ ಅಷ್ಟೇ ತೀಕ್ಷ್ಣ ಸ್ವರೂಪದ ಪ್ರತಿಕ್ರಿಯೆಗಳನ್ನು ನೀಡಿದ್ದಾರೆ. ರಾಹುಲ್ ಗಾಂಧಿ ಕ್ಷಮೆ ಕೇಳಬೇಕು ಎಂದು ಪಟ್ಟು ಹಿಡಿದಿದ್ದಾರೆ.

ಹಿಂದೆ ಲೋಕಸಭಾ ಚುನಾವಣೆಯ ವೇಳೆ ಕಾಂಗ್ರೆಸ್ ನಾಯಕ ಮಣಿಶಂಕರ್‌ ಅಯ್ಯರ್‌ ಅವರ ‘ನೀಚ ನಾಯಕ’ ಹೇಳಿಕೆಯು ಗುಜರಾತ್‌ನಲ್ಲಿ ಕಾಂಗ್ರೆಸ್‌ಗೆ ಏಟು ನೀಡಿತ್ತು. ತರೂರ್‌ ಹಾಗೂ ಶಿಂಧೆ ಅವರ ಹೇಳಿಕೆಗಳು ಐದು ರಾಜ್ಯಗಳಲ್ಲಿ ಸದ್ಯದಲ್ಲೇ ನಡೆಯಲಿರುವ ವಿಧಾನಸಭಾ ಚುನಾವಣೆಗಳ ಮೇಲೆ ಪರಿಣಾಮ ಬೀರುತ್ತವೆ ಎನ್ನಲಾಗುತ್ತಿದೆ. ಒಟ್ಟಿನಲ್ಲಿ ಕಾಂಗ್ರೆಸ್‌ಗೆ ತನ್ನ ನಾಯಕರ ಮಾತೇ ಮುಳ್ಳಾಗುತ್ತಿರುವಂತಿದೆ.

ಶಿವಕುಮಾರ್ ಆರ್. ಬಿಕ್ಕೇಗುಡ್ಡ, ತುಮಕೂರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT