ಮಂಗಳವಾರ, ಸೆಪ್ಟೆಂಬರ್ 21, 2021
28 °C

ಸರ್ಕಾರಿ ಸೌಲಭ್ಯ: ಪಡಿಪಾಟಲು ತಪ್ಪಿಸಿ

ವಾಚಕರ ವಾಣಿ Updated:

ಅಕ್ಷರ ಗಾತ್ರ : | |

ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶ್ರೀಸಾಮಾನ್ಯರಿಗೆ ಅನುಕೂಲಕರವಾದ ವಿಧವಾ ಮತ್ತು ಅಂಗವಿಕಲರ ಮಾಸಾಶನದ ಮೊತ್ತವನ್ನು ಹೆಚ್ಚಿಸಿರುವುದು ಶ್ಲಾಘನೀಯ. ಆದರೆ ಈ ಸೌಲಭ್ಯ ಪಡೆಯಲು ಅರ್ಹ ಫಲಾನುಭವಿಗಳು ಪಡುವ ಯಾತನೆಯ ನಿಯಂತ್ರಣಕ್ಕೂ ಸರ್ಕಾರ ಕ್ರಮ ಕೈಗೊಳ್ಳಬೇಕಿದೆ. ಇದಕ್ಕಾಗಿ ಅವರು ಕನಿಷ್ಠ 4-5 ಸಾವಿರ ರೂಪಾಯಿ ಖರ್ಚು ಮಾಡಬೇಕಾದ ಪರಿಸ್ಥಿತಿ ಇದೆ.

ಜೀವನ ನಿರ್ವಹಣೆಯೇ ಕಷ್ಟವಾಗಿರುವ ಇಂತಹ ಸಂದರ್ಭದಲ್ಲಿ ಅರ್ಹರು ಈ ಸೌಲಭ್ಯಗಳಿಂದ ವಂಚಿತರಾಗುತ್ತಿದ್ದಾರೆ. ಜೀವನೋಪಾಯಕ್ಕಾಗಿ ಸರ್ಕಾರದ ಸೌಲಭ್ಯಗಳನ್ನೇ ಅವಲಂಬಿಸಿರುವ ಇಂತಹವರಿಂದಲೂ ವಸೂಲಾತಿ ನಿರೀಕ್ಷಿಸುವವರಿಗೆ ಅಗತ್ಯವಾಗಿ ಕಡಿವಾಣ ಹಾಕಬೇಕಾಗಿದೆ.

- ತಿಮ್ಮೇಶ ಮುಸ್ಟೂರು, ಜಗಳೂರು

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು