ಆರ್ಥಿಕ ಸಂಕಷ್ಟದಲ್ಲಿರುವ ವಿವಿಧ ವಲಯಗಳ ಜನರಿಗೆ ಸರ್ಕಾರ ಸಹಾಯಧನ ಘೋಷಿಸಿದೆ. ಆದರೆ ಅರ್ಹರು ಈ ಸಂಬಂಧ ಅರ್ಜಿ ಸಲ್ಲಿಸಲು ಸಾಧ್ಯವಾಗುತ್ತಿಲ್ಲ. ಆದಷ್ಟು ಬೇಗ ಅರ್ಜಿ ಸಲ್ಲಿಸಲು ಅನುವು ಮಾಡಿಕೊಡಬೇಕು. ಏಕೆಂದರೆ ಲಾಕ್‍ಡೌನ್ ಮುಗಿದ ಬಳಿಕ ಗ್ರಾಮ ಪಂಚಾಯಿತಿ ಚುನಾವಣೆ ದಿನಾಂಕ ಘೋಷಣೆಯಾಗುತ್ತದೆ. ಆದ್ದರಿಂದ, ಚುನಾವಣೆ ದಿನಾಂಕ ಪ್ರಕಟವಾಗುವ ಮುಂಚಿತವಾಗಿಯೇ ಅರ್ಹ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಹಣ ವರ್ಗಾವಣೆ ಮಾಡಬೇಕಾಗಿದೆ.

ಆನಂತರ ಸರ್ಕಾರವು ಸಹಾಯಧನ ನೀಡಲು ಮುಂದಾದರೆ, ಚುನಾವಣೆ ನೀತಿ ಸಂಹಿತೆ ಉಲ್ಲಂಘನೆಯಾಗುತ್ತದೆ. ಜೊತೆಗೆ ಈ ವರ್ಗದ ಜನರ ವೋಟ್ ಬ್ಯಾಂಕ್ ಆಗಿಯೂ ಸಹಾಯಧನವನ್ನು ಬಳಸಿಕೊಂಡಂತೆ ಆಗುತ್ತದೆ.

-ಶಿವಶಂಕರ ಎಸ್.,ಮುತ್ತರಾಯನಹಳ್ಳಿ,ಮಧುಗಿರಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.