ಶುಕ್ರವಾರ, ಮೇ 29, 2020
27 °C

ವಾಚಕರ ವಾಣಿ| ಪಕ್ಷಾತೀತ ಹೋರಾಟದಿಂದ ‘ಹಸಿರು’ ಭಾಗ್ಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಭದ್ರಾ ಜಲಾಶಯದಿಂದ ವಾಣಿವಿಲಾಸ ಸಾಗರಕ್ಕೆ ಹತ್ತು ಟಿಎಂಸಿ ಅಡಿ ನೀರು ಹರಿಸಲು ಆಗ್ರಹಿಸಿ ಮುಖ್ಯಮಂತ್ರಿಗೆ ಪತ್ರ ಬರೆದಿರುವುದಾಗಿ ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವ ಶ್ರೀರಾಮುಲು ಅವರು ತಿಳಿಸಿರುವುದು ವರದಿಯಾಗಿದೆ. ಇದೊಂದು ಆಶಾದಾಯಕ ಹೆಜ್ಜೆ. ಸತತ ಬರಗಾಲಕ್ಕೆ ತುತ್ತಾಗುತ್ತಿರುವ ಚಿತ್ರದುರ್ಗ ಜಿಲ್ಲೆಯಲ್ಲಿ ಸಾವಿರಾರು ಅಡಿ ಕೊಳವೆಬಾವಿ ಕೊರೆದರೂ ಹನಿ ನೀರಿಲ್ಲದೆ ಭೂಮಿ ಬೆಂಗಾಡಾಗಿದೆ. ಈಗ ಭದ್ರೆಯಿಂದ ಬರುವ ಕೇವಲ ಎರಡೇ ಎರಡು ಟಿಎಂಸಿ ಅಡಿ ನೀರಿಗಾಗಿ ಜಿಲ್ಲೆಯ ಚಳ್ಳಕೆರೆ, ಹಿರಿಯೂರು, ಮೊಳಕಾಲ್ಮುರು, ಚಿತ್ರದುರ್ಗ ತಾಲ್ಲೂಕುಗಳ ಶಾಸಕರು, ರೈತರು, ಇತರ ಸಂಘಟನೆಗಳ ಪ್ರತಿನಿಧಿಗಳು ಪರಸ್ಪರ ಕಾದಾಡುತ್ತಾರೆ.

ಸಮುದ್ರ ಸೇರುವ ನೀರನ್ನು ಸದುಪಯೋಗ ಮಾಡಿಕೊಳ್ಳಲು ಬರಪೀಡಿತ ಜಿಲ್ಲೆಯ ಏಕೈಕ ಜಲಾಶಯಕ್ಕೆ ಹೆಚ್ಚಿನ ಪ್ರಮಾಣದಲ್ಲಿ ನೀರು ಪಡೆಯುವ ಸಲುವಾಗಿ ಈ ಭಾಗದ ಶಾಸಕರು, ಸಂಸದರು, ಮಠಾಧೀಶರು, ರೈತ ಸಂಘಟನೆಗಳು ಮತ್ತು ಸಾರ್ವಜನಿಕರು ಪಕ್ಷಾತೀತವಾಗಿ ಹೋರಾಡಿದರೆ, ನಿರ್ಲಕ್ಷ್ಯಕ್ಕೆ ಒಳಗಾಗಿರುವ ಈ ಭಾಗದ ಪ್ರದೇಶಗಳು ಹಸಿರು ಕಾಣಬಹುದು.

ಶಾಂತವೀರ ಎಸ್., ಚಿತ್ರದುರ್ಗ

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು