ಶುಕ್ರವಾರ, ಮೇ 29, 2020
27 °C

ವಾಚಕರ ವಾಣಿ| ಮತಬ್ಯಾಂಕ್ ಆಗದಿರಲಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಆರ್ಥಿಕ ಸಂಕಷ್ಟದಲ್ಲಿರುವ ವಿವಿಧ ವಲಯಗಳ ಜನರಿಗೆ ಸರ್ಕಾರ ಸಹಾಯಧನ ಘೋಷಿಸಿದೆ. ಆದರೆ ಅರ್ಹರು ಈ ಸಂಬಂಧ ಅರ್ಜಿ ಸಲ್ಲಿಸಲು ಸಾಧ್ಯವಾಗುತ್ತಿಲ್ಲ. ಆದಷ್ಟು ಬೇಗ ಅರ್ಜಿ ಸಲ್ಲಿಸಲು ಅನುವು ಮಾಡಿಕೊಡಬೇಕು. ಏಕೆಂದರೆ ಲಾಕ್‍ಡೌನ್ ಮುಗಿದ ಬಳಿಕ ಗ್ರಾಮ ಪಂಚಾಯಿತಿ ಚುನಾವಣೆ ದಿನಾಂಕ ಘೋಷಣೆಯಾಗುತ್ತದೆ. ಆದ್ದರಿಂದ, ಚುನಾವಣೆ ದಿನಾಂಕ ಪ್ರಕಟವಾಗುವ ಮುಂಚಿತವಾಗಿಯೇ ಅರ್ಹ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಹಣ ವರ್ಗಾವಣೆ ಮಾಡಬೇಕಾಗಿದೆ.

ಆನಂತರ ಸರ್ಕಾರವು ಸಹಾಯಧನ ನೀಡಲು ಮುಂದಾದರೆ, ಚುನಾವಣೆ ನೀತಿ ಸಂಹಿತೆ ಉಲ್ಲಂಘನೆಯಾಗುತ್ತದೆ. ಜೊತೆಗೆ ಈ ವರ್ಗದ ಜನರ ವೋಟ್ ಬ್ಯಾಂಕ್ ಆಗಿಯೂ ಸಹಾಯಧನವನ್ನು ಬಳಸಿಕೊಂಡಂತೆ ಆಗುತ್ತದೆ.

-ಶಿವಶಂಕರ ಎಸ್., ಮುತ್ತರಾಯನಹಳ್ಳಿ, ಮಧುಗಿರಿ

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು