ಭಾನುವಾರ, ಫೆಬ್ರವರಿ 5, 2023
21 °C

ವಾಚಕರ ವಾಣಿ | ಪ್ರಜಾಪ್ರಭುತ್ವ ವಿರೋಧಿ ಹೇಳಿಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬಿಜೆಪಿಯ ಕೇಂದ್ರ ಸಂಸದೀಯ ಮಂಡಳಿ ಹಾಗೂ ಕೇಂದ್ರ ಚುನಾವಣಾ ಸಮಿತಿಯ ಸದಸ್ಯರಾಗಿ ಇತ್ತೀಚೆಗೆ ನೇಮಕಗೊಂಡ ಸಂದರ್ಭದಲ್ಲಿ ಮಾತನಾಡಿದ ಬಿ.ಎಸ್‌.ಯಡಿಯೂರಪ್ಪ, ‘ರಾಜ್ಯದಲ್ಲಿ ಬೇರೆ ಪಕ್ಷ ಅಧಿಕಾರಕ್ಕೆ‌ ಬರಲು ಬಿಡುವುದಿಲ್ಲ’ ಎಂದು ಹೇಳಿರುವುದು ಒಪ್ಪತಕ್ಕ ಮಾತಲ್ಲ. ಇದೊಂದು ಪ್ರಜಾಪ್ರಭುತ್ವ ವಿರೋಧಿ ಹೇಳಿಕೆ ಸಹ ಆಗಿದ್ದು, ಜನರ ಆಯ್ಕೆಯ ಹಕ್ಕಿಗೆ ಚ್ಯುತಿ ತರುವ ಕೆಲಸವಾಗಿದೆ.

ರಾಜ್ಯದ ಜನ ತಮಗೆ ಇಷ್ಟವಾದ ಪಕ್ಷಕ್ಕೆ ಅಧಿಕಾರ‌ ನೀಡಲು ಪ್ರಜಾತಂತ್ರ ವ್ಯವಸ್ಥೆಯಲ್ಲಿ ಅವಕಾಶವಿದೆ. ಬೇರೆ ಪಕ್ಷಗಳು ಅಧಿಕಾರಕ್ಕೆ ಬರುವುದನ್ನು ತಡೆಯುವ ಹಕ್ಕು ಮತದಾರರಿಗೆ ಮಾತ್ರವಲ್ಲದೆ ಬೇರೆಯವರಿಗೆ ಇಲ್ಲ. ಅವರು ತಮ್ಮ ಪಕ್ಷದ ಪರವಾಗಿ ಪ್ರಚಾರ ಮಾಡಿ ಪಕ್ಷವನ್ನು ಅಧಿಕಾರಕ್ಕೆ ತರಲಿ, ಅದು ಬೇರೆ ಮಾತು. ಆದರೆ ಬೇರೆ ಪಕ್ಷಗಳು ಅಧಿಕಾರಕ್ಕೆ ಬರುವುದು ಬೇಡ ಎನ್ನುವುದು ಉದ್ಧಟತನದ ಮಾತು.
–ಕೆ.ವಿ.ವಾಸು, ಮೈಸೂರು

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು