ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿನಿಮೀಯ ರೀತಿಯಲ್ಲಿ ಸರ್ಕಾರ ರಚನೆ ತರವೇ?

Last Updated 24 ನವೆಂಬರ್ 2019, 17:28 IST
ಅಕ್ಷರ ಗಾತ್ರ

ರಾಜ್ಯವೊಂದರ ಮೇಲೆ ಹೇರಿದ್ದ ರಾಷ್ಟ್ರಪತಿ ಆಡಳಿತವನ್ನು ಹಿಂಪಡೆಯುವುದು ಈಗಿನ ಕೇಂದ್ರ ಸರ್ಕಾರಕ್ಕೆ ಚಿಟಿಕೆ ಹೊಡೆದಷ್ಟು ಸಲೀಸು ಎಂಬುದು ಮಹಾರಾಷ್ಟ್ರದ ವಿದ್ಯಮಾನದಿಂದ ಮನದಟ್ಟಾಗಿದೆ. ಮಹಾರಾಷ್ಟ್ರದಲ್ಲಿ ಬಿಜೆಪಿ ನೇತೃತ್ವದಲ್ಲಿ ಸರ್ಕಾರ ರಚಿಸಲು ಕೇಂದ್ರ ಸರ್ಕಾರವು ತನಗೆ ಇರುವ ಎಲ್ಲ ಅವಕಾಶ, ಅಧಿಕಾರವನ್ನು ಎಗ್ಗಿಲ್ಲದೆ ಬಳಸಿಕೊಂಡಿದೆ.

ರಾಷ್ಟ್ರಪತಿ ಆಡಳಿತ ಹಿಂಪಡೆಯುವ ಮುಂಚೆ ಸಂಸತ್ತಿನ ಅನುಮತಿ ಪಡೆಯಬೇಕು. ಆದರೆ, ತುರ್ತು ಸಂದರ್ಭದಲ್ಲಿ ಬಳಸಬಹುದಾದ ಪ್ರಧಾನಿಯವರ ಅಧಿಕಾರ ಬಳಸಿ ರಾಷ್ಟ್ರಪತಿ ಅಂಕಿತ ಹಾಕಿಸಿರುವ ಸರ್ಕಾರದ ನಡೆ ಸರಿಯಲ್ಲ. ಬಿಜೆಪಿಗೆ ಅಗತ್ಯ ಬೆಂಬಲವಿದ್ದರೆ ಸರ್ಕಾರ ರಚಿಸಲು ಯಾರದ್ದೂ ತಕರಾರು ಇರಲಿಲ್ಲ. ಆದರೆ, ಮಹಾರಾಷ್ಟ್ರದಲ್ಲಿ ಸಿನಿಮೀಯ ರೀತಿಯಲ್ಲಿ ಸರ್ಕಾರ ರಚಿಸುವ ಅಗತ್ಯವಾದರೂ ಏನಿತ್ತು? ಕೇಂದ್ರ ಸರ್ಕಾರ ಆತ್ಮವಿಮರ್ಶೆ ಮಾಡಿಕೊಳ್ಳಲಿ.

-ಲಕ್ಷ್ಮೀಕಾಂತರಾಜು ಎಂ.ಜಿ.,ಮಠಗ್ರಾಮ, ಗುಬ್ಬಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT