ಮಂಗಳವಾರ, 4 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಾಚಕರ ವಾಣಿ: ಅವರವರ ಅಭಿಪ್ರಾಯ ಅವರವರದು

Last Updated 30 ಏಪ್ರಿಲ್ 2021, 22:10 IST
ಅಕ್ಷರ ಗಾತ್ರ

ದಕ್ಷಿಣ ಕನ್ನಡ ಜಿಲ್ಲೆಯ ವ್ಯಕ್ತಿಯೊಬ್ಬರು ಫೇಸ್‍ಬುಕ್ ಖಾತೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಬಗ್ಗೆ ಅವಹೇಳನಕಾರಿಯಾಗಿ ಪೋಸ್ಟ್ ಹಾಕಿದ್ದಾರೆ. ಅವರ ಮೇಲೆ ಕಾನೂನಿನ ವ್ಯಾಪ್ತಿಯಲ್ಲಿ ಅವಕಾಶಗಳಿದ್ದರೆ ಕ್ರಮ ಕೈಗೊಳ್ಳಲು ಯಾರದೂ ಅಭ್ಯಂತರವಿಲ್ಲ. ಆದರೆ ಈ ಪ್ರಕರಣವನ್ನು ಮುಂದೆ ಮಾಡಿ ಅವರ ಪತ್ನಿಯನ್ನು ಬ್ಯಾರಿ ಸಾಹಿತ್ಯ ಅಕಾಡೆಮಿ ನಾಮನಿರ್ದೇಶಿತ ಸದಸ್ಯ ಸ್ಥಾನದಿಂದ ವಜಾಗೊಳಿಸಲಾಗಿದೆ.

ಅಕಾಡೆಮಿಯ ಅಧ್ಯಕ್ಷರ ನಿರ್ದೇಶನದ ಮೇರೆಗೆ ರಿಜಿಸ್ಟ್ರಾರ್ ಈ ಕ್ರಮ ಕೈಗೊಂಡಿದ್ದಾರೆ. ಗಂಡ ತಪ್ಪು ಮಾಡಿದ್ದರೆ ಹೆಂಡತಿಗೆ ಶಿಕ್ಷೆ ಕೊಡುವುದು ಯಾವ ನ್ಯಾಯ? ಪ್ರತಿಯೊಬ್ಬರೂ ತಮ್ಮದೇ ಆದ ಅಭಿಪ್ರಾಯವನ್ನು ಹೊಂದಿರುತ್ತಾರೆ. ಗಂಡ ತಪ್ಪು ಮಾಡಿದ ಎಂದು ಹೇಳಿ ಹೆಂಡತಿಯ ಮೇಲೆ ಕ್ರಮ ಕೈಗೊಳ್ಳುವುದು ಅಥವಾ ಹೆಂಡತಿ ತಪ್ಪು ಮಾಡಿದಳು ಎಂದು ಗಂಡನ ಮೇಲೆ ಕ್ರಮ ಕೈಗೊಳ್ಳುವುದನ್ನು ಯಾರೂ ಒಪ್ಪಲಾಗದು. ಅವರವರ ಅಭಿಪ್ರಾಯ ಅವರವರದಾಗಿರುತ್ತದೆ.

ಅನೇಕರು ಸಾಮಾಜಿಕ ಜಾಲತಾಣಗಳಲ್ಲಿ ಅನೇಕ ಅಭಿಪ್ರಾಯಗಳನ್ನು ವ್ಯಕ್ತಪಡಿಸುತ್ತಾರೆ. ಅಂಥ ಸಂದರ್ಭದಲ್ಲೆಲ್ಲ ಅವರ ಸಂಬಂಧಿಕರ ಮೇಲೆ ಕ್ರಮ ಜರುಗಿಸುವುದು ಕಾನೂನುಬಾಹಿರವಾಗಿರುತ್ತದೆ. ಇದನ್ನು ಇಲ್ಲಿಗೇ ಬಿಟ್ಟರೆ ಅನೇಕರ ಮೇಲೆ ಇಂಥ ಕ್ರಮಗಳನ್ನು ಜರುಗಿಸುವ ಪ್ರಯತ್ನಗಳು ನಡೆಯಬಹುದು. ಆದ್ದರಿಂದ ರಿಜಿಸ್ಟ್ರಾರ್ ಕೂಡಲೇ ತಮ್ಮ ನಿರ್ಧಾರವನ್ನು ಹಿಂದಕ್ಕೆ ಪಡೆಯಬೇಕು.

-ಈ.ಬಸವರಾಜು, ಬೆಂಗಳೂರು

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT