ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಾಚಕರ ವಾಣಿ: ಉಚಿತ ಲ್ಯಾಪ್‌ಟಾಪ್‌ ನೀಡಿ, ಭವಿಷ್ಯ ಕಾಪಾಡಿ

Last Updated 4 ಮೇ 2021, 19:30 IST
ಅಕ್ಷರ ಗಾತ್ರ

ಕೊರೊನಾ ಸೋಂಕಿನ ಕಾರಣದಿಂದ ರಾಜ್ಯದ ಶಾಲಾ ಕಾಲೇಜುಗಳು ಬಂದ್ ಆಗಿರುವ ಈ ಸಮಯದಲ್ಲಿ, ಹಲವಾರು ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಆನ್‌ಲೈನ್‌ ತರಗತಿಗಳನ್ನು ತೆಗೆದುಕೊಳ್ಳಲು ಸೂಚಿಸಲಾಗಿದೆ. ವೈದ್ಯಕೀಯ, ಎಂಜಿನಿಯರಿಂಗ್, ಪದವಿ, ಡಿಪ್ಲೊಮಾದಂತಹ ಕೋರ್ಸುಗಳಿಗೆ ಕಾಲೇಜುಗಳು ಆನ್‌ಲೈನ್‌ ತರಗತಿಗಳನ್ನು ತೆಗೆದುಕೊಳ್ಳುತ್ತಿವೆ. ಹಲವಾರು ವಿದ್ಯಾರ್ಥಿಗಳು ಗ್ರಾಮೀಣ ಭಾಗದವರಾಗಿದ್ದು ಅವರವರ ಊರುಗಳಲ್ಲಿ ಸರಿಯಾದ ನೆಟ್‌ವರ್ಕ್ ಸಿಗುವುದಿಲ್ಲ ಮತ್ತು ಅವರ ಬಳಿ ಲ್ಯಾಪ್‌ಟಾಪ್‌ ಇಲ್ಲದ ಕಾರಣ ಆನ್‌ಲೈನ್‌ ತರಗತಿಗಳಿಗೆ ಹಾಜರಾಗಲು ಸಾಧ್ಯವಾಗುತ್ತಿಲ್ಲ.

ಇಂತಹ ಹಲವಾರು ವಿದ್ಯಾರ್ಥಿಗಳನ್ನು ಗಮನದಲ್ಲಿ ಇಟ್ಟುಕೊಂಡು, ನೆರೆಯ ಆಂಧ್ರಪ್ರದೇಶದಲ್ಲಿ ನೀಡಿರುವಂತೆ ಕರ್ನಾಟಕದ ಕಾಲೇಜು ವಿದ್ಯಾರ್ಥಿಗಳಿಗೂ ಸರ್ಕಾರದ ವತಿಯಿಂದ ಉಚಿತ ಲ್ಯಾಪ್‌ಟಾಪ್ ಹಾಗೂ ಇಂಟರ್ನೆಟ್ ಸೇವೆಯನ್ನು ಒದಗಿಸಿಕೊಡಬೇಕು. ಪ್ರತೀ ಹಳ್ಳಿಯಲ್ಲೂ ಉತ್ತಮ ನೆಟ್‌ವರ್ಕ್ ಸಿಗುವಂತೆ ನೋಡಿಕೊಳ್ಳಲು ಗ್ರಾಮ ಪಂಚಾಯಿತಿಗಳಿಗೆ ಸೂಚನೆ ನೀಡಬೇಕು. ಈ ಮೂಲಕ, ದೇಶದ ಆಸ್ತಿಯಾಗಿರುವ ವಿದ್ಯಾರ್ಥಿಗಳು ಹಾಗೂ ಯುವಕರ ಭವಿಷ್ಯವನ್ನು ಕಾಪಾಡಬೇಕು.

ಲಕ್ಷ್ಮಿ ಕಿಶೋರ್ ಅರಸ್, ಕೂಡ್ಲೂರು, ಚನ್ನಪಟ್ಟಣ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT