ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಾಚಕರ ವಾಣಿ | ಚುನಾವಣಾ ಕಾರ್ಯ: ಇರಲಿ ಶಾಶ್ವತ ಸಿಬ್ಬಂದಿ

Last Updated 17 ನವೆಂಬರ್ 2022, 18:38 IST
ಅಕ್ಷರ ಗಾತ್ರ

ಮತದಾರರ ಪಟ್ಟಿಯ ಪರಿಷ್ಕರಣೆ ಕಾರ್ಯಕ್ಕೆ ಶಾಲಾ ಶಿಕ್ಷಕರು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರನ್ನು ಮತಗಟ್ಟೆ ಅಧಿಕಾರಿಗಳೆಂದು ನೇಮಿಸಲಾಗಿದೆ. ಇವರು ವರ್ಷಪೂರ್ತಿ ಚುನಾವಣಾ ಕಾರ್ಯಕ್ಕಾಗಿ ನಿಗದಿತ ಪಾಠ- ಪ್ರವಚನ ಕಾರ್ಯವನ್ನು ಬಿಟ್ಟು ಅಲೆಯುವಂತಾಗಿದೆ. ಇದರಿಂದ ಮಕ್ಕಳ ಶೈಕ್ಷಣಿಕ ಹಾಗೂ ವ್ಯಕ್ತಿತ್ವದ ಬೆಳವಣಿಗೆ ಕುಂಠಿತವಾಗುತ್ತದೆ. ಇನ್ನು ಮೇಲ್ವಿಚಾರಕರನ್ನಾಗಿ ನಗರ ಸ್ಥಳೀಯ ಸಂಸ್ಥೆ ಹಾಗೂ ಕಂದಾಯ ಇಲಾಖೆಯ ನೌಕರರನ್ನು ನೇಮಿಸಲಾಗಿದೆ. ಸಾರ್ವಜನಿಕ ಸೇವೆಗಳು ಇವುಗಳ ವ್ಯಾಪ್ತಿಗೆ ಹೆಚ್ಚಾಗಿ ಒಳಪಡುತ್ತವೆ. ಇಲ್ಲಿಯ ಸಿಬ್ಬಂದಿಗೆ ಕಾರ್ಯದ ಒತ್ತಡ ಹೆಚ್ಚಾಗಿರುತ್ತದೆ.

ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆ ನಡೆಸುವ ಚುನಾವಣಾ ಆಯೋಗದ ಅಭಿಲಾಷೆ ಮುಖ್ಯವಾದುದು. ಇದಕ್ಕೆ ಆಯೋಗವು ಶಾಶ್ವತವಾದ ಸಿಬ್ಬಂದಿಯನ್ನು ನೇಮಕ ಮಾಡಿಕೊಂಡು ಪ್ರತ್ಯೇಕವಾಗಿ ಕಾರ್ಯನಿರ್ವಹಿಸಲಿ. ಇದರಿಂದ ನಿರುದ್ಯೋಗದ ಸಮಸ್ಯೆಗೂ ಪರಿಹಾರ ಸಿಗುತ್ತದೆ, ಅಸಲಿ ಮತದಾರರ ಪಟ್ಟಿಯೂ ದೊರೆಯುತ್ತದೆ.
ಶೋಭಾ ಎಸ್.ವಿ.,ಚಿತ್ರದುರ್ಗ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT