ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಾಚಕರ ವಾಣಿ | ನಿಲ್ದಾಣ ವಿವಾದ: ಉದಾಸೀನವೇ ಮದ್ದು

Last Updated 18 ನವೆಂಬರ್ 2022, 20:47 IST
ಅಕ್ಷರ ಗಾತ್ರ

ಮೈಸೂರಿನ ಗುಂಬಜ್ ಮಾದರಿಯ ಬಸ್ ನಿಲ್ದಾಣದ ವಿನ್ಯಾಸಕ್ಕೆ ಸಂಬಂಧಿಸಿದ ವಿವಾದ ಇತ್ಯರ್ಥಕ್ಕೆ ತಜ್ಞರನ್ನು ಕಳುಹಿಸಿ ವರದಿ ತರಿಸಿಕೊಂಡು ಸಮಸ್ಯೆ ಬಗೆಹರಿಸುವುದಾಗಿ ಮುಖ್ಯಮಂತ್ರಿ ಹೇಳಿದ್ದಾರೆ! ಇದು ಎಷ್ಟೊಂದು ಹಾಸ್ಯಾಸ್ಪದ! ತಜ್ಞರಿಂದ ವರದಿ ತರಿಸಿಕೊಳ್ಳುವಷ್ಟು ದೊಡ್ಡ ಸಮಸ್ಯೆಯೇ ಅದು?

ಬಸ್‌ಗಳಿಗಾಗಿ ಕಾಯುವ ಜನರಿಗೆ ಮಳೆ, ಬಿಸಿಲಿನಿಂದ ರಕ್ಷಣೆ ನೀಡುವ ಸಲುವಾಗಿ ನಿಲ್ದಾಣಗಳನ್ನು ನಿರ್ಮಿಸ
ಲಾಗುತ್ತದೆ. ಹೀಗಿರುವಾಗ ಜನರ ತೆರಿಗೆ ಹಣವನ್ನು ಬೇಕಾಬಿಟ್ಟಿ ಖರ್ಚು ಮಾಡಿ ಅದನ್ನು ಸಿಂಗಾರ ಮಾಡುವಂತಹದ್ದು ಏನೂ ಇಲ್ಲ. ಸಂಸದರು ಮತ್ತು ಶಾಸಕರು ಒಂದೇ ಪಕ್ಷದವರಾಗಿದ್ದು, ಚುನಾವಣಾ ಸಮಯವಾದ್ದರಿಂದ ಪ್ರಚಾರ ಗಿಟ್ಟಿಸಿಕೊಳ್ಳುವ ಪ್ರಯತ್ನ ಇದಾಗಿದೆ. ಸಾರ್ವಜನಿಕರು ಈ ಬಗ್ಗೆ ತಲೆ ಕೆಡಿಸಿಕೊಳ್ಳದೆ ತಮ್ಮ ಪಾಡಿಗೆ ತಾವಿದ್ದರೆ ಇದರ ಗಾಳಿಯು ಮೈಸೂರು ಬಿಟ್ಟು ಹೊರಗೆ ಬರುವುದಿಲ್ಲ.
–ರಾಜು ಬಿ. ಲಕ್ಕಂಪುರ,ಜಗಳೂರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT