ಗುರುವಾರ , ಮೇ 26, 2022
29 °C

ವಾಚಕರ ವಾಣಿ: ಎಚ್ಚರಿಕೆಯ ಸಂದೇಶ ರವಾನೆಯಾಗಲಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಸಾಮಾಜಿಕ ಭದ್ರತಾ ಯೋಜನೆಗಳಡಿ ಸುಮಾರು ಮೂರೂವರೆ ಲಕ್ಷದಷ್ಟು ಬೋಗಸ್ ಫಲಾನುಭವಿಗಳನ್ನು ಪತ್ತೆ ಹಚ್ಚಿ, ಅಕ್ರಮವಾಗಿ ಪಡೆಯುತ್ತಿದ್ದ ಪಿಂಚಣಿ ಸೌಲಭ್ಯ ರದ್ದು ಮಾಡಲಾಗಿದೆ ಎಂದು ಕಂದಾಯ ಸಚಿವರು ತಿಳಿಸಿದ್ದಾರೆ. ಪಿಂಚಣಿ ಸೌಲಭ್ಯ ರದ್ದು ಮಾಡಿದರಷ್ಟೇ ಸಾಲದು, ಯೋಜನೆಯನ್ನು ದುರುಪಯೋಗ ಮಾಡಿಕೊಂಡವರು ಹಾಗೂ ಅದಕ್ಕೆ ಸಹಕರಿಸಿದ ಕಂದಾಯ ಇಲಾಖೆಯ ಸಿಬ್ಬಂದಿ ವಿರುದ್ಧವೂ ಕಠಿಣ ಕ್ರಮ ತೆಗೆದುಕೊಳ್ಳಬೇಕು. ಈ ಮೂಲಕ, ಮುಂದೆ ಯಾವುದೇ ಸರ್ಕಾರಿ ಯೋಜನೆಗಳಲ್ಲಿ ಅಕ್ರಮ ನಡೆಯದಂತೆ ಎಚ್ಚರಿಕೆಯ ಸಂದೇಶ ರವಾನೆಯಾಗಬೇಕು.

- ಎ.ಜೆ.ಜಾವೀದ್, ಹಾಸನ

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು