ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಾಚಕರವಾಣಿ: ಮಾತಿನಲ್ಲಿ ‘ಕಿಡಿ’ ಹಚ್ಚುವವರನ್ನು ನಿರ್ಬಂಧಿಸಿ

Last Updated 29 ಜುಲೈ 2022, 19:30 IST
ಅಕ್ಷರ ಗಾತ್ರ

ಕರಾವಳಿ ಕರ್ನಾಟಕದಲ್ಲಿ ಕೊಲೆಗಳು ಸರಣಿಯೋಪಾದಿಯಲ್ಲಿ ಆಗುತ್ತಿರುವುದು ರಾಜ್ಯದ ಜನರಲ್ಲಿ ಆತಂಕ ಸೃಷ್ಟಿಸಿದೆ. ಇದನ್ನು ಎಷ್ಟು ಸಾಧ್ಯವೋ ಅಷ್ಟು ಬೇಗ ನಿಯಂತ್ರಣಕ್ಕೆ ತರಬೇಕಾಗಿದೆ. ಇದಕ್ಕಾಗಿ ಬಿಗಿಯಾದ ಕಾನೂನು ಕ್ರಮಗಳನ್ನು ಕೈಗೊಳ್ಳಬೇಕೆಂದು ಎಲ್ಲರೂ ಒತ್ತಾಯಿಸುತ್ತಿದ್ದಾರೆ. ಇದು ಆಗಬೇಕಿರುವ ಕೆಲಸವೂ ಹೌದು. ಈ ನಡುವೆ ಮತ್ತೊಂದು ದೊಡ್ಡ ಸಮಸ್ಯೆ ಇದೆ. ಅದರ ಕಡೆಗೆ ಗಮನಹರಿಸುವ ಅಗತ್ಯವಿದೆ. ಅದೇನೆಂದರೆ, ಜನಪ್ರತಿನಿಧಿಗಳಾದ ನಳಿನ್ ಕುಮಾರ್ ಕಟೀಲ್, ಆರ್. ಅಶೋಕ, ಡಾ. ಅಶ್ವತ್ಥನಾರಾಯಣ, ಸಿ.ಟಿ. ರವಿ, ಶ್ರೀರಾಮ ಸೇನೆ ಅಧ್ಯಕ್ಷ ಪ್ರಮೋದ್‌ ಮುತಾಲಿಕ್ ಅವರು ಆಡುತ್ತಿರುವ ಮಾತುಗಳು ಸಮಾಜದಲ್ಲಿ ಬೆಂಕಿ ಹಚ್ಚುವ ಕೆಲಸ ಮಾಡುತ್ತಿವೆ. ಮೊದಲು ಇವರ ವಿರುದ್ಧ ಕ್ರಮ ಕೈಗೊಳ್ಳಬೇಕು.

- ಈ. ಬಸವರಾಜು, ಬೆಂಗಳೂರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT