ಶನಿವಾರ, ಅಕ್ಟೋಬರ್ 23, 2021
21 °C

ವಾಚಕರ ವಾಣಿ: ಬಸ್‌ಪಾಸ್‌ ಬಗ್ಗೆಯೂ ಗಮನವಿರಲಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕೋವಿಡ್ ಮೂರನೇ ಅಲೆಯ ಭೀತಿಯ ನಡುವೆಯೂ ಸರ್ಕಾರ ಶಾಲಾ ಕಾಲೇಜು ಆರಂಭಿಸಿರುವುದು ಸ್ವಾಗತಾರ್ಹ. ಇದರಿಂದ ಆನ್‌ಲೈನ್‌ ಪಾಠದ ಸಂದರ್ಭದಲ್ಲಿ ಎದುರಾಗುತ್ತಿದ್ದ ಅನೇಕ ಸಮಸ್ಯೆಗಳಿಂದ ತಾತ್ಕಾಲಿಕ ಮುಕ್ತಿ ದೊರೆತಂತಾಗಿದೆ. ಆದರೆ ಹಳ್ಳಿಗಳಿಂದ ಸಮೀಪದ ನಗರ, ಪಟ್ಟಣದ ಶಾಲೆಗಳಿಗೆ ಹೋಗಲು ಮಕ್ಕಳು, ಸರ್ಕಾರ ನೀಡುವ ರಿಯಾಯಿತಿ ದರದ ಪಾಸನ್ನೇ ಅವಲಂಬಿಸಿದ್ದಾರೆ. ಶಾಲೆ ಪ್ರಾರಂಭಿಸಿರುವ ಸರ್ಕಾರ, ಬಸ್‌ಪಾಸ್‌ಗೆ ಸಂಬಂಧಿಸಿದಂತೆ ಇದುವರೆಗೂ ಯಾವುದೇ ಸ್ಪಷ್ಟ ಕ್ರಮ ತೆಗೆದುಕೊಂಡಿಲ್ಲ. ಕೋವಿಡ್‌ನಿಂದ ಆಥಿ೯ಕ ಸಂಕಷ್ಟ ಎದುರಿಸುತ್ತಿರುವ ಪಾಲಕರಿಗೆ ಮಕ್ಕಳ ಪ್ರಯಾಣ ವೆಚ್ಚವನ್ನು ಭರಿಸಲಾಗುತ್ತಿಲ್ಲ. ಹೀಗಾಗಿ ಸಾರಿಗೆ ಸಚಿವರು ಸೂಕ್ತ ಕ್ರಮ ಕೈಗೊಂಡು, ಸುಗಮ ಶೈಕ್ಷಣಿಕ ಚಟುವಟಿಕೆಗೆ ಅವಕಾಶ ಮಾಡಿಕೊಡಲಿ.

ರೇಣುಕಾ ಬಿ. ಗೊಡಚಿ, ಧಾರವಾಡ

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.