ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಾಚಕರ ವಾಣಿ: ಬಾಲಿಶ ಹೇಳಿಕೆ ಸಾಕುಮಾಡಿ

Last Updated 26 ಆಗಸ್ಟ್ 2021, 22:00 IST
ಅಕ್ಷರ ಗಾತ್ರ

ಮೈಸೂರಿನಲ್ಲಿ ಯುವತಿಯೊಬ್ಬಳ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿರುವುದು ಖಂಡನೀಯ. ಈ ಸಂಬಂಧ ಗೃಹ ಸಚಿವರು ‘ಕಾಂಗ್ರೆಸ್‌ನವರು ನನ್ನ ಮೇಲೆ ರೇಪ್ ಮಾಡಲು ಹೊರಟಿದ್ದಾರೆ’ ಎಂಬ ಬಾಲಿಶವಾದ ಹೇಳಿಕೆಯನ್ನು ನೀಡಿದ್ದಾರೆ (ಟೀಕೆ ವ್ಯಕ್ತವಾದ ಬಳಿಕ ಹೇಳಿಕೆ ಹಿಂದಕ್ಕೆ ಪಡೆದಿದ್ದಾರೆ). ಜೊತೆಗೆ ಆ ಯುವತಿ ಆ ಹೊತ್ತಿನಲ್ಲಿ ಅಲ್ಲಿಗೆ ಹೋಗಬಾರದಿತ್ತು ಎಂಬರ್ಥದಲ್ಲಿ ಮಾತನಾಡಿದ್ದಾರೆ. ಇದು ಸಂವೇದನಾರಹಿತ ಹೇಳಿಕೆ. ಇಡೀ ರಾಜ್ಯ ತಮ್ಮ ಮಾತನ್ನು ಕೇಳಿದೆ ಎಂಬುದು ಸಚಿವರ ಗಮನದಲ್ಲಿ ಇರಲಿ.

ವಿರೋಧ ಪಕ್ಷಗಳು ತಮ್ಮ ಕರ್ತವ್ಯವನ್ನು ಮಾಡುತ್ತಿವೆ. ಸಚಿವರ ಈಗಿನ ಹೇಳಿಕೆಯು ಸರ್ಕಾರವನ್ನು ಯಾರೂ ಪ್ರಶ್ನಿಸಬಾರದು ಎಂದು ಹೇಳಿದಂತಿದೆ. ಸಾವಿರಾರು ಹೆಣ್ಣುಮಕ್ಕಳು ಎಲ್ಲಾ ಕ್ಷೇತ್ರಗಳಲ್ಲಿ ಪುರುಷರಿಗೆ ಸರಿಸಮಾನರಾಗಿ ದುಡಿಯುತ್ತಿದ್ದಾರೆ. ತಪ್ಪಿತಸ್ಥರು ಎಷ್ಟೇ ಬಲಾಢ್ಯರಾದರೂ ಸರಿ ಅವರನ್ನು ಬಂಧಿಸಿ, ಹೆಣ್ಣುಮಕ್ಕಳು ಮುಕ್ತವಾಗಿ ಓಡಾಡುವಂತೆ ರಕ್ಷಣೆ ಕೊಡಿ.

ಡಾ. ಮಲ್ಲತ್ತಹಳ್ಳಿ ಎಚ್. ತುಕಾರಾಂ,ಬೆಂಗಳೂರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT