ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಾಚಕರ ವಾಣಿ: ಸಾವಿನೊಡನೆ ಚೆಲ್ಲಾಟ ಬೇಡ

Last Updated 4 ಮೇ 2021, 19:30 IST
ಅಕ್ಷರ ಗಾತ್ರ

ಚಾಮರಾಜನಗರ ಜಿಲ್ಲೆಯಲ್ಲಿ ಆಮ್ಲಜನಕದ ಕೊರತೆಯಿಂದ ಒಂದೇ ದಿನ 24 ಮಂದಿ ಮೃತಪಟ್ಟಿರುವುದು ಅತ್ಯಂತ ದುರದೃಷ್ಟಕರ ಮತ್ತು ಶೋಚನೀಯ ಸಂಗತಿ. ‘ರಾಜ್ಯದಲ್ಲಿ ಉತ್ಪಾದನೆಯಾಗುತ್ತಿರುವ ಅಷ್ಟೂ ಆಮ್ಲಜನಕವನ್ನು ಸ್ಥಳೀಯವಾಗಿ ಬಳಸಲು ಕೇಂದ್ರ ಸರ್ಕಾರ ಅನುಮತಿ ನೀಡಿದರೆ ತಕ್ಷಣ ಬಿಕ್ಕಟ್ಟಿನಿಂದ ಪಾರಾಗಲು ಸಾಧ್ಯ’ ಎಂದು ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್ ಹೇಳಿದ್ದಾರೆ. ಆಮ್ಲಜನಕದ ಕೊರತೆಯಿಂದ ನೂರಾರು ಕೋವಿಡ್‌ ರೋಗಿಗಳು ಉಸಿರುಗಟ್ಟಿ ಸಾಯುತ್ತಿರುವಾಗ, ರಾಜ್ಯ ಸರ್ಕಾರವು ಕೇಂದ್ರ ಸರ್ಕಾರದ ಅನುಮತಿಗೆ ಕಾಯದೆ ಕೂಡಲೇ ಆಮ್ಲಜನಕವನ್ನು ರೋಗಿಗಳಿಗೆ ಸರಬರಾಜು ಮಾಡಿ ಸಾವು-ನೋವುಗಳನ್ನು ತಪ್ಪಿಸಬೇಕು.

ಇಂತಹ ಸಂದಿಗ್ಧ ಮತ್ತು ವಿಷಮ ಪರಿಸ್ಥಿತಿಯಲ್ಲಿ ಆಮ್ಲಜನಕವನ್ನು ಸರಬರಾಜು ಮಾಡಲು ಕೇಂದ್ರ ಸರ್ಕಾರವು ಅನುಮತಿ ಕೊಡದೇ ಇರುವುದು ಅದರ ಕರ್ತವ್ಯಲೋಪ ಮತ್ತು ನಿರ್ಲಕ್ಷ್ಯತನವನ್ನು ತೋರಿಸುತ್ತದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಜನರ ಸಾವಿನೊಡನೆ ಚೆಲ್ಲಾಟವಾಡುತ್ತಿವೆ ಎನಿಸುತ್ತಿದೆ. ಅಧಿಕಾರ ಹಿಡಿಯುವ ಸಲುವಾಗಿ ಚುನಾವಣಾ ಪ್ರಚಾರಕ್ಕೆ ತೋರಿಸುವ ಆಸಕ್ತಿಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ಆಡಳಿತದಲ್ಲಿ ತೋರಿಸಬೇಕು.

ಎನ್.ನಂಜೇಗೌಡ, ಬೆಂಗಳೂರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT