ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಾಚಕರವಾಣಿ: ಉಜ್ವಲ ಯೋಜನೆಗೆ ಪೆಟ್ಟು ಬೀಳದಿರಲಿ

Last Updated 9 ನವೆಂಬರ್ 2021, 19:31 IST
ಅಕ್ಷರ ಗಾತ್ರ

ಬಡತನ ರೇಖೆಗಿಂತ ಕೆಳಗಿರುವ ಕುಟುಂಬಗಳ ಮಹಿಳೆಯರಿಗೆ ಎಲ್‌ಪಿಜಿ ಸಂಪರ್ಕ ಒದಗಿಸಲು ‘ಪ್ರಧಾನಮಂತ್ರಿ ಉಜ್ವಲ ಯೋಜನೆ’ಯನ್ನು ಕೇಂದ್ರ ಸರ್ಕಾರ ಜಾರಿಗೆ ತಂದಿದೆ. ಈ ಯೋಜನೆಯು ವಂಚಿತ ಕುಟುಂಬಗಳು ಎಲ್‌ಪಿಜಿ ಸಂಪರ್ಕ ಪಡೆಯಲು ಮತ್ತು ಮಹಿಳೆಯರನ್ನು ಸಬಲಗೊಳಿಸಲು ನೆರವಾಯಿತು. ಆದರೆ ಇತ್ತೀಚೆಗೆ ದಿನದಿಂದ ದಿನಕ್ಕೆ ಏರುತ್ತಿರುವ ಎಲ್‌ಪಿಜಿ ದರ ಈ ಯೋಜನೆಗೆ ಪೆಟ್ಟು ನೀಡುವಂತಿದೆ. ಏಕೆಂದರೆ ಹೊತ್ತಿನ ಊಟಕ್ಕೂ ಕಷ್ಟಪಡುವ ಬಡಜನರಿಗೆ ದಿನದಿಂದ ದಿನಕ್ಕೆ ಬೆಲೆ ಏರಿಕೆಯಾಗುತ್ತಿರುವ ಸಿಲಿಂಡರ್ ಅನ್ನು ಕೊಳ್ಳುವುದು ಅಸಾಧ್ಯವಾಗುತ್ತಿದೆ.

ಈ ಯೋಜನೆಯ ಫಲಾನುಭವಿಗಳು ಸಾರ್ವಜನಿಕ ವಿತರಣಾ ವ್ಯವಸ್ಥೆಯಲ್ಲಿ ನೀಡುವ ಸೀಮೆಎಣ್ಣೆಯನ್ನು ಖರೀದಿಸಲು ಕೂಡ ಅನರ್ಹರಾಗಿರುತ್ತಾರೆ. ಬಡಜನರ ಏಳಿಗೆ ಗಾಗಿ ಜಾರಿಗೆ ತಂದಿರುವ ಯೋಜನೆಯು ಅವರನ್ನು ಆರ್ಥಿಕ ಸಂಕಷ್ಟಕ್ಕೆ ತಳ್ಳದಂತೆ ಇರಲಿ.

- ನಿರ್ಮಲಾ ನಾಗೇಶ್,ಧಾರವಾಡ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT