ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಾಚಕರವಾಣಿ: ಉತ್ತರಾಧಿಕಾರಿ; ಬೇರೆ ಆಯ್ಕೆ ಇರಬಾರದೇ?

Last Updated 24 ಜುಲೈ 2022, 19:30 IST
ಅಕ್ಷರ ಗಾತ್ರ

ಮುಂದಿನ ಚುನಾವಣೆಯಲ್ಲಿ ಶಿಕಾರಿಪುರದಿಂದ ತಮ್ಮ ಮಗ ಬಿ.ವೈ. ವಿಜಯೇಂದ್ರ ಸ್ಪರ್ಧಿಸುತ್ತಾರೆ. ಅವರನ್ನು ಹೆಚ್ಚು ಮತಗಳ ಅಂತರದಿಂದ ಗೆಲ್ಲಿಸಬೇಕು ಎಂದು ಬಿಜೆಪಿ ಮುಖಂಡ ಬಿ.ಎಸ್‌. ಯಡಿಯೂರಪ್ಪ ಅಲ್ಲಿನ ಮತದಾರ ರಲ್ಲಿ ಮನವಿ ಮಾಡಿಕೊಂಡಿದ್ದಾರೆ. ಇದನ್ನು ಗಮನಿಸಿದಾಗ, ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ನಿಜ ಅರ್ಥದಲ್ಲಿ ಬಯಸುವ ಯಾರಲ್ಲಾದರೂ ಹಲವಾರು ಪ್ರಶ್ನೆಗಳು ಪುಟಿದೇಳುತ್ತವೆ. ಯಡಿಯೂರಪ್ಪನವರ ನಂತರ ಅವರ ಮಗನನ್ನೇ ಅಲ್ಲಿನ ಮತದಾರರು ಏಕೆ ಆರಿಸಬೇಕು? ಅವರಿಗೆ ಬೇರೆ ಆಯ್ಕೆ ಇರಬಾರದೇ?! ಯಡಿಯೂರಪ್ಪ ಅವರನ್ನು ಲಾಗಾಯ್ತಿನಿಂದಲೂ ಬೆಂಬಲಿಸಿಕೊಂಡು ಬಂದಿರುವ ಅವರದೇ ಪಕ್ಷದ ಒಬ್ಬ ಕಾರ್ಯಕರ್ತ ಏಕೆ ಅವರ ಉತ್ತರಾಧಿಕಾರಿ ಆಗಬಾರದು?

ಅವರ ನಂತರ ಅವರ ಮಕ್ಕಳು, ಮೊಮ್ಮಕ್ಕಳಿಗೇ ಜನ ಜೈ ಎನ್ನುತ್ತಿರಬೇಕೆ? ತಮ್ಮ ನಂತರ ತಮ್ಮ ಮಕ್ಕಳನ್ನೇ ತಮ್ಮ ಉತ್ತರಾಧಿಕಾರಿಯನ್ನಾಗಿ ಬಿಂಬಿಸುವ ಪರಿಪಾಟ ನಮ್ಮ ರಾಜಕಾರಣಿಗಳಲ್ಲಿ ಹೆಚ್ಚಾಗುತ್ತಿದೆ. ಇದು, ಒಳ್ಳೆಯ
ಬೆಳವಣಿಗೆಯಲ್ಲ!

-ಚಾವಲ್ಮನೆ ಸುರೇಶ್ ನಾಯಕ್,ಹಾಲ್ಮತ್ತೂರು, ಕೊಪ್ಪ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT