ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಾಚಕರವಾಣಿ: ಮತದಾರರಿಗೆ ಸ್ಪಷ್ಟತೆ ಅಗತ್ಯ

Last Updated 27 ಜುಲೈ 2022, 18:45 IST
ಅಕ್ಷರ ಗಾತ್ರ

ರಾಜ್ಯ ವಿಧಾನಸಭೆ ಚುನಾವಣೆಗೆ ಏಳೆಂಟು ತಿಂಗಳಷ್ಟೇ ಉಳಿದಿದೆ. ಮುಂದಿನ ಚುನಾವಣೆಯಲ್ಲಿ ಬಹುಮತ ದೊರೆತರೆ ಮುಖ್ಯಮಂತ್ರಿ ಯಾರಾಗಲಿದ್ದಾರೆ ಎಂಬ ವಿಷಯಕ್ಕೆ ಸಂಬಂಧಿಸಿದ ಲೆಕ್ಕಾಚಾರಗಳುಎಲ್ಲಾ ರಾಜಕೀಯ ಪಕ್ಷಗಳಲ್ಲೂ ಬೂದಿ ಮುಚ್ಚಿದ ಕೆಂಡದಂತೆ ಕಂಡಂತೆ, ಕಾಣದಂತೆ ಇದ್ದೇ ಇವೆ. ಆದರೆ ನಿಜಕ್ಕೂ ಸ್ಪಷ್ಟತೆ ಇರ ಬೇಕಾದುದು ಮತದಾರರಲ್ಲಿ. ಅತಂತ್ರ ವಿಧಾನಸಭೆ ಸೃಷ್ಟಿಯಾಗದಂತೆ ನೋಡಿಕೊಳ್ಳಬೇಕಾದ ಗುರುತರ ಜವಾಬ್ದಾರಿ ಮತದಾರರ ಮೇಲಿದೆ. ರಾಷ್ಟ್ರದ ಏಕತೆ, ರಾಜ್ಯದ ಬಗೆಗೆ ಕಳಕಳಿ, ಸ್ಪಷ್ಟ ಸಾಂಸ್ಕೃತಿಕ ನೀತಿಯ ಹಿತವರಿತ ಪಕ್ಷಕ್ಕೆ ಪೂರ್ಣ ಬಹುಮತ ನೀಡಬೇಕು. ಈ ಲೆಕ್ಕಾಚಾರದಲ್ಲಿ ರಾಜ್ಯದ ಜನರ ಚಿತ್ತ ದೃಢವಾಗಬೇಕಾಗಿದೆ.

- ಆರ್.ವೆಂಕಟರಾಜು,ಬೆಂಗಳೂರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT