ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಾಚಕರ ವಾಣಿ: ರೈಲು ಸಂಪರ್ಕ; ಬೇಡಿಕೆ ಈಡೇರಿಸಿ

Last Updated 17 ಮಾರ್ಚ್ 2021, 19:30 IST
ಅಕ್ಷರ ಗಾತ್ರ

ಮಂಡ್ಯ ಲೋಕಸಭಾ ಕ್ಷೇತ್ರವನ್ನು ಪ್ರತಿನಿಧಿಸುತ್ತಿರುವ ಸುಮಲತಾ ಅಂಬರೀಶ್ ಅವರು ಹೆಜ್ಜಾಲ- ಚಾಮರಾಜನಗರ ನಡುವಿನ ರೈಲು ಸಂಚಾರ ಕಾಮಗಾರಿಯ ವಿಚಾರವನ್ನು ಲೋಕಸಭೆಯಲ್ಲಿ ಪ್ರಸ್ತಾಪಿಸಿರುವುದು ಸಂತಸದಾಯಕ. ಹೆಜ್ಜಾಲ, ಕನಕಪುರ, ಮಳವಳ್ಳಿ, ಕೊಳ್ಳೇಗಾಲ ಮೂಲಕ ಚಾಮರಾಜನಗರ ನಡುವೆ ರೈಲು ಸಂಪರ್ಕ ಕಲ್ಪಿಸುವ ಪ್ರಸ್ತಾವವು 1996-97ರಲ್ಲಿಯೇ ಇತ್ತು. ಆದರೆ, ಇಂದಿಗೂ ಕಾಮಗಾರಿ ಆರಂಭವೇ ಆಗಿಲ್ಲದಿರುವುದು ವಿಪರ್ಯಾಸ. ಈ ಯೋಜನೆಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ತಲಾ ಶೇ 50ರಷ್ಟು ಹಣವನ್ನು ವಿನಿಯೋಗಿಸಬೇಕಿದೆ. ಕೇಂದ್ರ ಮತ್ತು ರಾಜ್ಯದಲ್ಲಿ ಈಗ ಒಂದೇ ಪಕ್ಷ ಅಧಿಕಾರದಲ್ಲಿ ಇದೆ. ಹಣ ಭರಿಸುವ ವಿಚಾರದಲ್ಲಿ ಸಹಮತ ಸಾಧಿಸಿ, ಆದಷ್ಟು ಬೇಗ ಕಾಮಗಾರಿ ಆರಂಭಿಸಲು ಮುಂದಾದರೆ, ಇಲ್ಲಿನ ಜನರ ಎಷ್ಟೋ ವರ್ಷಗಳ ಬೇಡಿಕೆಯನ್ನು ಈಡೇರಿಸಿದಂತಾಗುತ್ತದೆ.

-ಚೆಲುವರಾಜು ಕೆ., ಧನಗೆರೆ, ಕೊಳ್ಳೇಗಾಲ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT