ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಾಚಕರ ವಾಣಿ: ಮೈಸೂರಿನ ಪ್ರಗತಿ; ವಿಸ್ತೃತ ಚರ್ಚೆ ನಡೆಯಲಿ

Last Updated 14 ಮಾರ್ಚ್ 2021, 19:30 IST
ಅಕ್ಷರ ಗಾತ್ರ

ಮೈಸೂರು ನಗರದ ಸಾಂಸ್ಕೃತಿಕ ಪರಂಪರೆಯನ್ನು ಉಳಿಸಿ, ಬೆಳೆಸಲು ಪ್ರವಾಸೋದ್ಯಮ ಸಚಿವ ಸಿ.ಪಿ.ಯೋಗೇಶ್ವರ್‌ ಕೆಲವು ಪ್ರಮುಖ ನಿರ್ಧಾರಗಳನ್ನು ಪ್ರಕಟಿಸಿದ್ದಾರೆ. ಇವುಗಳಲ್ಲಿ ಕೆಲವು ನಿರ್ಧಾರಗಳು ಸ್ವಾಗತಾರ್ಹವಾಗಿದ್ದರೂ ಚಾಮುಂಡಿ ಬೆಟ್ಟಕ್ಕೆ ರೋಪ್ ವೇ ನಿರ್ಮಾಣಕ್ಕೆ ಪರಿಸರವಾದಿಗಳಿಂದ ವಿರೋಧ ವ್ಯಕ್ತವಾಗಿದೆ. ಈ ಬಗ್ಗೆ ಪರಿಸರವಾದಿಗಳೊಂದಿಗೆ ಸಚಿವರು ವಿಸ್ತೃತವಾದ ಚರ್ಚೆ ನಡೆಸಬೇಕಾಗಿದೆ. ಅದೇ ರೀತಿ ಪ್ರತಿವರ್ಷ ಆಚರಿಸಲಾಗುವ ನಾಡಹಬ್ಬ ದಸರೆಯನ್ನು ನಿರ್ವಹಿಸಲು ಒಂದು ಶಾಶ್ವತವಾದ ಸ್ವಾಯತ್ತ ಮಂಡಲಿ ರಚಿಸುವುದು ಈಗಿನ ತುರ್ತು ಅಗತ್ಯವಾಗಿದೆ. ಈ ಮಂಡಳಿಯು ಮೈಸೂರಿನ ರಾಜ ಪ್ರಮುಖರು, ಉಸ್ತುವಾರಿ ಸಚಿವರು, ಲೋಕಸಭಾ ಸದಸ್ಯರು ಸೇರಿದಂತೆ ಜನಪ್ರತಿನಿಧಿಗಳು, ಜಿಲ್ಲಾಧಿಕಾರಿ ಸೇರಿದಂತೆ ಹಿರಿಯ ಅಧಿಕಾರಿಗಳು, ಸ್ಥಳೀಯ ಗಣ್ಯ ನಾಗರಿಕರು, ಪತ್ರಕರ್ತರು ಹಾಗೂ ವಿವಿಧ ಕ್ಷೇತ್ರಗಳ ಸಾಧಕರನ್ನು ಒಳಗೊಂಡಿರಬೇಕು.

ದೆಹಲಿಯ ಪ್ರಗತಿ ಮೈದಾನದ ಮಾದರಿಯಲ್ಲಿ ನಗರದಲ್ಲಿ ಕೂಡ ವಸ್ತುಪ್ರದರ್ಶನವನ್ನು ವರ್ಷಪೂರ್ತಿ ನಡೆಸುವ ಕಾರ್ಯಕ್ರಮ ರೂಪಿಸಬಹುದು. ದಸರಾ ಹಬ್ಬದ ಸಂದರ್ಭದಲ್ಲಿ ನಡೆಸುವ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಸ್ಥಳೀಯ ಪ್ರತಿಭೆಗಳಿಗೂ ಆದ್ಯತೆ ನೀಡುವಂತೆ ಆಗಬೇಕು.

-ಡಾ. ಕೆ.ವಿ.ವಾಸು, ಮೈಸೂರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT