ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಾಂವಿಧಾನಿಕ ಪ್ರಜ್ಞಾವಂತಿಕೆ ಅಗತ್ಯ

Last Updated 9 ಫೆಬ್ರುವರಿ 2021, 19:30 IST
ಅಕ್ಷರ ಗಾತ್ರ

ಬೆಂಗಳೂರಿನಲ್ಲಿ ನಡೆದ ಕುರುಬ ಸಮುದಾಯದ ಸಮಾವೇಶದಲ್ಲಿ ಸಚಿವ ಈಶ್ವರಪ್ಪನವರು ‘ಸಿದ್ದರಾಮಯ್ಯ ಅವರನ್ನು ಕುರುಬ ಸಮಾಜ ಮುಖ್ಯಮಂತ್ರಿಯನ್ನಾಗಿ ಮಾಡಿದ್ದು’ ಎಂದು ಹೇಳಿದ್ದಾರೆ. ಅದೇ ರೀತಿ, ಕೆಲವು ದಿನಗಳ ಹಿಂದೆ ಕೂಡಲಸಂಗಮದ ಜಯಮೃತ್ಯುಂಜಯ ಸ್ವಾಮೀಜಿ, ‘ಪಂಚಮಸಾಲಿ ಸಮುದಾಯವು ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿಯನ್ನಾಗಿ ಮಾಡಿದೆ’ ಎಂದಿದ್ದರು. ಈ ಹೇಳಿಕೆಗಳನ್ನು ಗಮನಿಸಿದಾಗ, ಕೇವಲ ಒಂದೇ ಒಂದು ಸಮುದಾಯವು ಯಾರನ್ನಾದರೂ ಮುಖ್ಯಮಂತ್ರಿ ಮಾಡಲು ಸಾಧ್ಯವೇ ಎಂಬ ಪ್ರಶ್ನೆ ಮೂಡುತ್ತದೆ. ಈ ಬಗ್ಗೆ ಎಲ್ಲರೂ ಜಾತ್ಯತೀತವಾಗಿ ಚಿಂತನೆ ಮಾಡಬೇಕಾಗಿದೆ. ಯಾವುದೋ ಒಂದು ನಿರ್ದಿಷ್ಟ ಸಮುದಾಯವು ಯಾರನ್ನಾದರೂ ಮುಖ್ಯಮಂತ್ರಿ ಮಾಡಲು ಸಾಧ್ಯವಾಗುವುದಾದರೆ ಕರ್ನಾಟಕದಲ್ಲಿ ಎಷ್ಟೊಂದು ಸಮುದಾಯಗಳಿವೆ. ಹಾಗಾದರೆ ಅವುಗಳ ಪಾತ್ರ ಏನೂ ಇಲ್ಲವೇ? ಅವರಿಗೆ ಪ್ರಜಾಪ್ರಭುತ್ವದಲ್ಲಿ ಯಾವುದೇ ಹಕ್ಕುಗಳಿಲ್ಲವೇ? ರಾಜಕಾರಣಿಗಳು ಹಾಗೂ ಸ್ವಾಮೀಜಿಗಳು ಈ ರೀತಿಯ ಹೇಳಿಕೆಗಳನ್ನು ನೀಡಿ, ಕರ್ನಾಟಕದ ಮುಖ್ಯಮಂತ್ರಿ ಪದವಿಗೆ ಒಂದು ಸಮುದಾಯದ ಪಟ್ಟಕಟ್ಟಿ ಅವಮಾನ ಮಾಡಬಾರದು. ಮುಖ್ಯಮಂತ್ರಿ ಪದವಿ ಜಾತ್ಯತೀತ ಮತ್ತು ಸಾಂವಿಧಾನಿಕವೇ ಹೊರತು ಯಾವುದೇ ಸಮುದಾಯಕ್ಕೆ ಸಂಬಂಧಪಟ್ಟಿದ್ದಲ್ಲ. ಹೀಗಾಗಿ ರಾಜಕಾರಣಿಗಳು, ಸ್ವಾಮೀಜಿಗಳು ಸಾಂವಿಧಾನಿಕ
ಪ್ರಜ್ಞಾವಂತಿಕೆಯಿಂದ ಹೇಳಿಕೆಗಳನ್ನು ನೀಡಲಿ.

- ಶಿವನಕೆರೆ ಬಸವಲಿಂಗಪ್ಪ,ದಾವಣಗೆರೆ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT