ಶುಕ್ರವಾರ, 1 ಡಿಸೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಾಚಕರ ವಾಣಿ| ವಿಧಾನಪರಿಷತ್‌ ಚುನಾವಣೆ: ಪ್ರಾಥಮಿಕ ಶಿಕ್ಷಕರಿಗೂ ಹಕ್ಕಿರಲಿ

Last Updated 20 ಜೂನ್ 2022, 19:45 IST
ಅಕ್ಷರ ಗಾತ್ರ

ಪ್ರಾಥಮಿಕ ಶಿಕ್ಷಣವು ರಾಷ್ಟ್ರದ ಭದ್ರಬುನಾದಿ. ದೇಶದ ಶೈಕ್ಷಣಿಕ ಸ್ಥಿತಿಗತಿ ಸುಧಾರಣೆಯ ದಿಸೆಯಲ್ಲಿ ಅದು ತಳಹದಿ ಇದ್ದಂತೆ. ಹೀಗಾಗಿ, ಪ್ರಾಥಮಿಕ ಶಿಕ್ಷಣ ಹಾಗೂ ಪ್ರಾಥಮಿಕ ಶಾಲಾ ಶಿಕ್ಷಕರ ಸಮಸ್ಯೆಗಳನ್ನು ಪ್ರತಿನಿಧಿಸುವ ದಿಸೆಯಲ್ಲಿ ರಾಜ್ಯದ ವಿಧಾನಪರಿಷತ್ತಿನಲ್ಲಿ ಒಂದು ಪ್ರತ್ಯೇಕ ಕ್ಷೇತ್ರವನ್ನು ನಿಗದಿ ಮಾಡಿ, ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಮತ ಚಲಾಯಿಸುವ ಹಕ್ಕನ್ನು ಒದಗಿಸಬೇಕು. ಈ ಮೂಲಕ, ವಿಧಾನ ಪರಿಷತ್ತಿನ ಚುನಾವಣೆಯಲ್ಲಿ ಮತದಾನದಿಂದ ವಂಚಿತರಾಗಿರುವ ಪ್ರಾಥಮಿಕ ಶಿಕ್ಷಕರ ಬಹುದಿನಗಳ ಈ ಬೇಡಿಕೆಯನ್ನು ಈಡೇರಿಸಲು ಸರ್ಕಾರ ಮುಂದಾಗಬೇಕು. ಪ್ರೌಢಶಿಕ್ಷಣ, ಕಾಲೇಜಿನಂತಹ ಉನ್ನತ ಹಂತದ ಬೋಧಕರಿಗೆ ಮತದಾನದ ಹಕ್ಕನ್ನು ನೀಡಿ ಪ್ರಾಥಮಿಕ ಶಾಲಾ ಶಿಕ್ಷಕರ ಬಗ್ಗೆ ಮಲತಾಯಿ ಧೋರಣೆ ಅನುಸರಿಸುತ್ತಿರುವುದು ಸರಿಯಲ್ಲ.

- ಜಿ.ಪಿ.ಬಿರಾದಾರ,ದೇವರಹಿಪ್ಪರಗಿ, ವಿಜಯಪುರ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT