ಭಾನುವಾರ, ನವೆಂಬರ್ 27, 2022
26 °C

ಅಡಿಕೆ ಆಮದು ಆತಂಕಕಾರಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕೇಂದ್ರ ಸರ್ಕಾರವು ಭೂತಾನ್‌ನಿಂದ 17,000 ಟನ್ ಅಡಿಕೆ ಆಮದು ಮಾಡಿಕೊಳ್ಳಲು ನಿರ್ಧರಿಸಿರುವುದು ಅಡಿಕೆ ಬೆಳೆಗಾರರಿಗೆ ತುಂಬಾ ಆತಂಕಕಾರಿ ಸಂಗತಿ. ನಮ್ಮ ದೇಶದಲ್ಲಿ ಒಂದು ಕೋಟಿಗೂ ಹೆಚ್ಚು ಅಡಿಕೆ ಬೆಳೆಗಾರರ ಕುಟುಂಬಗಳಿವೆ ಎಂದು ಅಂದಾಜಿಸಲಾಗಿದೆ. ಅಡಿಕೆ ಕೃಷಿ ಮತ್ತು ಅಡಿಕೆಗೆ ಸಂಬಂಧಿಸಿದ ಉದ್ಯಮದ ಮೇಲೆ ಅವಲಂಬಿತರು ಸುಮಾರು ಹತ್ತು ಕೋಟಿಗೂ ಅಧಿಕ ಎನ್ನಲಾಗಿದೆ. ಹೀಗಿರುವಾಗ ಇಷ್ಟೊಂದು ಭಾರಿ ಪ್ರಮಾಣದಲ್ಲಿ ಹಿಂದೆಂದೂ ಇಲ್ಲದಷ್ಟು ಅಡಿಕೆ ಆಮದು ಏಕೆ ಎಂಬುದೇ ದೊಡ್ಡ ಪ್ರಶ್ನೆ. ಅದರಲ್ಲೂ ಕರ್ನಾಟಕದಲ್ಲಿ ಅಡಿಕೆ ಬೆಳೆಗಾರರ ಸಂಖ್ಯೆ ಅಧಿಕ. 

ಕೊರೊನಾ ಸಾಂಕ್ರಾಮಿಕದ ನಡುವೆಯೂ ಅಡಿಕೆಯು ಬೆಲೆ ಕಾಯ್ದುಕೊಂಡು ಬೆಳೆಗಾರರ ಕೈ ಹಿಡಿದಿದೆ. ಅಡಿಕೆ ಬೆಳೆಗಾರರ ಹಿತಾಸಕ್ತಿಯನ್ನು ಗಮನದಲ್ಲಿ ಇಟ್ಟುಕೊಂಡು ಕೇಂದ್ರ ಸರ್ಕಾರವು ಅಡಿಕೆ ಆಮದು ನಿರ್ಧಾರವನ್ನು ಕೈ ಬಿಡಬೇಕು. 

-ವಿಜಯಕುಮಾರ್ ಎಚ್.ಕೆ., ರಾಯಚೂರು

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.