ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಲಿಕೆ ಪರ ತೀರ್ಮಾನ ಕೈಗೊಳ್ಳಬೇಕಿದೆ

ಅಕ್ಷರ ಗಾತ್ರ

ಓಮೈಕ್ರಾನ್ ಹರಡುತ್ತಿರುವ ಕಾರಣದಿಂದ ಬೆಂಗಳೂರಿನ ಶಾಲೆಗಳನ್ನು ರಾಜ್ಯ ಸರ್ಕಾರ 15 ದಿನಗಳ ಕಾಲ ಮುಚ್ಚುವಂತೆ ಆದೇಶಿಸಿದೆ. ಎರಡು ವರ್ಷಗಳ ಲಾಕ್‌ಡೌನ್ ನಂತರ ಪ್ರಾರಂಭವಾದ ಶಾಲೆಗಳಿಗೆ ಹೋಗುತ್ತಿರುವ ವಿದ್ಯಾರ್ಥಿಗಳು ಈಗಷ್ಟೇ ಕಲಿಕೆಯ ಕಡೆಗೆ ಮುಖ ಮಾಡಿದ್ದಾರೆ. ಅದರಲ್ಲಿಯೂ ಸರ್ಕಾರಿ ಶಾಲೆಗಳ ಮಕ್ಕಳ ಆರೈಕೆಯ ಜೊತೆಗೆ ಕಲಿಕೆಗೂ ದೊಡ್ಡ ಹೊಡೆತ ಬೀಳಲಿದೆ.

ಸರ್ಕಾರಿ ವ್ಯವಸ್ಥೆಯಲ್ಲಿ ಆನ್‌ಲೈನ್ ಕಲಿಕೆಗೆ ಅವಕಾಶಗಳು ತುಂಬಾ ಕಡಿಮೆ. ಈ ಕಾರಣದಿಂದ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳ ನಡುವೆ ಅಂತರ ಕಾಯ್ದುಕೊಂಡು ಒಂದು ಬೆಂಚ್‌ನಲ್ಲಿ ಇಬ್ಬರೇ ವಿದ್ಯಾರ್ಥಿಗಳು ಕೂರುವಂತೆ ನೋಡಿಕೊಂಡು ತರಗತಿಗಳನ್ನು ನಡೆಸುವುದು ಸೂಕ್ತ. ಸ್ಥಳಾವಕಾಶ ಕಡಿಮೆ ಇರುವ ಶಾಲೆಗಳಲ್ಲಿ ಬೆಳಿಗ್ಗೆ ಮತ್ತು ಮಧ್ಯಾಹ್ನ ಎರಡು ಶಿಫ್ಟ್‌ಗಳಲ್ಲಿ ಶಾಲೆಗಳನ್ನು ನಡೆಸಬಹುದಾಗಿದೆ. ಸರ್ಕಾರವು ವಿದ್ಯಾರ್ಥಿಗಳ ಕಲಿಕೆಯ ಪರವಾಗಿ ತೀರ್ಮಾನಗಳನ್ನು ಕೈಗೊಳ್ಳಬೇಕಾದ ಅಗತ್ಯವಿದೆ.

- ಈ.ಬಸವರಾಜು,ಬೆಂಗಳೂರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT