ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಂಗವಿಕಲರಿಂದ ಮತದಾನ ಜಾಗೃತಿ ರ‍್ಯಾಲಿ

ನನ್ನ ಮತ ನನ್ನ ಶಕ್ತಿ; ಜಿಲ್ಲಾ ಚುನಾವಣಾಧಿಕಾರಿ ವಾಸಿರೆಡ್ಡಿ ವಿಜಯ ಜ್ಯೋತ್ಸ್ನಾ
Last Updated 17 ಏಪ್ರಿಲ್ 2018, 6:54 IST
ಅಕ್ಷರ ಗಾತ್ರ

ಚಿತ್ರದುರ್ಗ: ಮತದಾನದ ಜಾಗೃತಿ ಮತ್ತು ಅದರ ಮಹತ್ವವನ್ನು ಸಾರ್ವಜನಿಕರಿಗೆ ತಿಳಿಸುವ ಉದ್ದೇಶದಿಂದ ಅಂಗವಿಕಲರ ಬೈಕ್ ರ‍್ಯಾಲಿಯನ್ನು ಸೋಮವಾರ ಆಯೋಜಿಸಲಾಗಿತ್ತು.‌ರ‍್ಯಾಲಿಗೆ ಜಿಲ್ಲಾ ಚುನಾವಣಾಧಿಕಾರಿ ವಿ.ವಿ.ಜ್ಯೋತ್ಸ್ನಾ ಅವರು ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿದರು.

ತಾಲ್ಲೂಕು ಪಂಚಾಯ್ತಿ ಕಚೇರಿಮುಂಭಾಗದಿಂದ ಪ್ರಾರಂಭ ವಾದ ರ‍್ಯಾಲಿ ಇಲ್ಲಿನ ಪ್ರಮುಖ ರಸ್ತೆ ಮಾರ್ಗಗಳಲ್ಲಿ ಸಂಚರಿಸಿತು.  200ಕ್ಕೂ ಹೆಚ್ಚು ಅಂಗವಿಕಲರು ತಮ್ಮ ವಾಹನಗಳೊಂದಿಗೆ ಪಾಲ್ಗೊಂಡಿದ್ದರು. ಇದೇ ಸಂದರ್ಭದಲ್ಲಿ ‘ತಪ್ಪದೇ ಅರ್ಹರೆಲ್ಲರೂ ಮತ ಚಲಾಯಿಸಿ’ ಎಂಬಿತ್ಯಾದಿ ಫಲಕ ಪ್ರದರ್ಶಿಸಿದರಲ್ಲದೆ, ಮತದಾನದ ಮಹತ್ವ ಸಾರಿದರು.

ನನ್ನ ಮತ ನನ್ನ ಶಕ್ತಿ:  ಜಿಲ್ಲಾ ಚುನಾವಣಾಧಿಕಾರಿ ವಿ.ವಿ.ಜ್ಯೋತ್ಸ್ನಾ ರ‍್ಯಾಲಿ ಉದ್ದೇಶಿಸಿ ಮಾತನಾಡಿ, ‘ಚುನಾವಣೆಗಳಲ್ಲಿ ಯಾವ ತಾರತಮ್ಯವಿಲ್ಲದೆ ಅರ್ಹ ಮತದಾರರು ತಮ್ಮ ಹಕ್ಕು ಚಲಾಯಿಸುವ ಅವಕಾಶವಿದೆ. ಉತ್ತಮ ಸರ್ಕಾರಕ್ಕಾಗಿ ನನ್ನ ಮತ ನನ್ನ ಶಕ್ತಿಯಾಗಿದೆ ಎಂಬ ಅರಿವಿರಲಿ’ ಎಂದರು.

ಚುನಾವಣೆ ಸಂದರ್ಭವನ್ನು ದುರ್ಬಳಕೆ ಮಾಡಿಕೊಳ್ಳುವವರ ಬಗ್ಗೆ ಎಚ್ಚರಿಕೆಯಿಂದ ಇರಬೇಕು. ಕೆಲವರು ಪ್ರಜಾಪ್ರಭುತ್ವದ ಎಲ್ಲಾ ಸೌಲಭ್ಯ ಅನುಭವಿಸುತ್ತಿದ್ದಾರೆ. ಆದರೆ, ಮತ ಚಲಾಯಿಸದೇ ವ್ಯವಸ್ಥೆಯನ್ನು ಟೀಕಿಸುವವರು ಇದ್ದಾರೆ. ಇದು ಖಂಡಿತ ಉತ್ತಮ ಬೆಳವಣಿಗೆಯಲ್ಲ ಎಂದರು.

ಮೇ 12ರಂದು ರಾಜ್ಯ ವಿಧಾನಸಭೆಗೆ ಚುನಾವಣೆ ನಡೆಯಲಿದ್ದು, ಪ್ರತಿಯೊಬ್ಬರೂ ತಮ್ಮ ಮತವನ್ನು ಚಲಾಯಿಸುವ ಮೂಲಕ ಉತ್ತಮ ಸರ್ಕಾರ ಬರಲು ನಿಮ್ಮ ಸಹಕಾರವನ್ನು ನೀಡಬೇಕು ಎಂದು ಹೇಳಿದರು.

ವಿದ್ಯುನ್ಮಾನ ಮತಯಂತ್ರ ಹಾಗೂ ವಿ.ವಿ.ಪ್ಯಾಟ್ ಕುರಿತು ಅಧಿಕಾರಿ ಅಮ್ಜತ್ ಪ್ರಾತ್ಯಕ್ಷಿಕೆ ತೋರಿಸಿದರು. ಅಂಗವಿಕಲರು ಅಣಕು ಮತದಾನ ಮಾಡಿ ತಾವು ಮತ ಚಲಾಯಿಸಿರುವ ಬಗ್ಗೆ ಖಾತರಿ ಪಡಿಸಿಕೊಂಡರು.

ಜಿಲ್ಲಾ ಸ್ವೀಪ್‌ ಸಮಿತಿ ಅಧ್ಯಕ್ಷ ಪಿ.ಎನ್.ರವೀಂದ್ರ, ಸಮಿತಿ ಕಾರ್ಯದರ್ಶಿ ಧನಂಜಯಪ್ಪ ಇದ್ದರು. ಜಿಲ್ಲಾ ಅಂಗವಿಕಲರ ಕಲ್ಯಾಣ ಇಲಾಖೆ ಅಧಿಕಾರಿ ವೈಶಾಲಿ ಪ್ರತಿಜ್ಞಾವಿಧಿ ಬೋಧಿಸಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ನಟರಾಜ್ ಸ್ವಾಗತಿಸಿದರು.

ಜಿಲ್ಲಾಡಳಿತ, ಜಿಲ್ಲಾ ಸ್ವೀಪ್ ಸಮಿತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ತಾಲ್ಲೂಕು ಪಂಚಾಯ್ತಿ ಹಾಗೂ ಅಂಗವಿಕಲರ, ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ ರ‍್ಯಾಲಿ ಆಯೋಜಿಸಲಾಗಿತ್ತು.

‘ಯೋಗ್ಯ ಪ್ರತಿನಿಧಿ ಆಯ್ಕೆ ನಿಮ್ಮ ಕೈಯಲ್ಲಿದೆ’

‘ಯಾವುದೇ ಆಮಿಷಗಳಿಗೆ, ಒಂದೆರಡು ಸಾವಿರಕ್ಕೆ ತಮ್ಮ ಅಮೂಲ್ಯ ಮತವನ್ನು ಮಾರಿಕೊಳ್ಳದೆ, ಸಾರ್ವಜನಿಕರ ನಿಜವಾದ ಸಮಸ್ಯೆಗಳನ್ನು ಅರಿತು ಸಮಗ್ರ ಅಭಿವೃದ್ಧಿಗೆ ಚಿಂತಿಸುವ ಯೋಗ್ಯ ಪ್ರತಿನಿಧಿಯನ್ನು ಆಯ್ಕೆ ಮಾಡಿಕೊಳ್ಳುವ ಹಕ್ಕು ನಿಮ್ಮ ಮತದಾನದಲ್ಲಿದೆ’ ಎಂದು ಜ್ಯೋತ್ಸ್ನಾ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT