ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೇಕಿದೆ ಆಮ್ಲಜನಕ ಬಸ್ ಸೇವೆ

ಅಕ್ಷರ ಗಾತ್ರ

ಬೆಂಗಳೂರಿನಲ್ಲಿ ಬಿಎಂಟಿಸಿ ವತಿಯಿಂದ ಪ್ರಾರಂಭಿಸಲಾದ ಆಕ್ಸಿಜನ್ ಬಸ್ ಸೇವೆಯು ಯಶಸ್ವಿಯಾಗಿರುವುದರಿಂದ, ಈ ಸೇವಾ ಸೌಲಭ್ಯವನ್ನು ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಿಗೂ ರಾಜ್ಯ ಸರ್ಕಾರ ವಿಸ್ತರಿಸಬೇಕು. ಬಹುತೇಕ ಎಲ್ಲ ಆಸ್ಪತ್ರೆಗಳಲ್ಲೂ ಕೋವಿಡ್ ರೋಗಿಗಳ ದಟ್ಟಣೆ ಹೆಚ್ಚಾಗಿರುವುದರಿಂದ, ರೋಗಿಗಳು ಹೊಸದಾಗಿ ಬಂದು ಸೇರಿದಾಗ ಅವರಿಗೆ ಆಸ್ಪತ್ರೆಯಲ್ಲಿ ಆಮ್ಲಜನಕ ನೀಡುವುದು ವಿಳಂಬವಾಗುತ್ತಿದೆ. ಅಷ್ಟೇ ಅಲ್ಲ, ಆಸ್ಪತ್ರೆಯಲ್ಲಿ ಸ್ಥಳಾಭಾವದಿಂದ ರೋಗಿಗಳಿಗೆ ಅಲ್ಲಿ ಕುಳಿತು ಕಾಯುವುದಕ್ಕೂ ಕಷ್ಟವಾಗುತ್ತಿದೆ. ಇದನ್ನೆಲ್ಲ ತಪ್ಪಿಸಲು ಸಾರ್ವಜನಿಕರಿಗೆ ಬಸ್ಸಿನಲ್ಲಿಯೇ ತುರ್ತು ಆಮ್ಲಜನಕ ಸೌಲಭ್ಯ ಒದಗಿಸಿದರೆ ಉಪಯುಕ್ತ ಎನಿಸುತ್ತದೆ. ಆಮ್ಲಜನಕ ಪೂರೈಸಲು ಅನುಕೂಲವಾಗುವಂತೆ ವಿಶೇಷವಾಗಿ ವಿನ್ಯಾಸಗೊಳಿಸಿದ ಕೆಎಸ್ಆರ್‌ಟಿಸಿ ಬಸ್ಸುಗಳನ್ನು ಎಲ್ಲಾ ಜಿಲ್ಲೆಗಳ ಸರ್ಕಾರಿ ಆಸ್ಪತ್ರೆಗಳ ಆವರಣದಲ್ಲಿ ಇರಿಸಬೇಕು. ಈ ಬಸ್ಸುಗಳಲ್ಲಿ ತುರ್ತಾಗಿ ಅಗತ್ಯ ಆಮ್ಲಜನಕ ಪಡೆದುಕೊಳ್ಳಲು ಸಾಧ್ಯವಾಗುವಂತೆ ಎಲ್ಲ ವೈದ್ಯಕೀಯ ಉಪಕರಣಗಳನ್ನೂ ಅಳವಡಿಸಬೇಕು. ಈಗಾಗಲೇ ಬಹಳಷ್ಟು ಖಾಸಗಿ ಸಂಸ್ಥೆಗಳು ಇಂತಹ ಸಹಕಾರ ನೀಡಲು ಮುಂದೆ ಬಂದಿವೆ. ಇದನ್ನು ಸರ್ಕಾರ ಸದುಪಯೋಗ ಪಡಿಸಿಕೊಳ್ಳಬೇಕು.

– ವಿಜಯಕುಮಾರ್ ಎಚ್.ಕೆ.,ರಾಯಚೂರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT