ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಬ್ಬು ಬಾಕಿ ಪಾವತಿ: ಕ್ರಮ ಅಗತ್ಯ

Last Updated 22 ಅಕ್ಟೋಬರ್ 2021, 19:30 IST
ಅಕ್ಷರ ಗಾತ್ರ

ಪ್ರಸಕ್ತ ಸಾಲಿನ ಕಬ್ಬು ನುರಿಸುವ ಹಂಗಾಮು ಪ್ರಾರಂಭವಾಗಿದ್ದು, ಹಲವಾರು ಕಾರ್ಖಾನೆಗಳಲ್ಲಿ ಈಗಾಗಲೇ ಚಾಲನೆ ನೀಡಲಾಗಿದೆ. ಕೆಲವೊಂದಿಷ್ಟು ಕಾರ್ಖಾನೆಗಳು ಇನ್ನೂ ಕಬ್ಬಿನ ಬಾಕಿ ಹಣ ಪಾವತಿಸಿಲ್ಲ.ರೈತರೆಲ್ಲರೂ ಒಂದುಗೂಡಿ ಅಧಿಕಾರಿಗಳಿಂದ ಹಿಡಿದು ಮುಖ್ಯಮಂತ್ರಿಯವರೆಗೂ ಮನವಿ ಸಲ್ಲಿಸಿದರೂ ಪ್ರಯೋಜನವಾಗದೆ ಅವರ ಬದುಕು ದುಸ್ತರವಾಗಿದೆ. ಡೀಸೆಲ್ ಬೆಲೆ ಏರಿಕೆಯಿಂದ ಹೊಲದಲ್ಲಿ ಉಳುಮೆ ಮಾಡುವ ಯಂತ್ರೋಪಕರಣಗಳ ಬಾಡಿಗೆ ದರವೂ ಹೆಚ್ಚಾಗಿದೆ. ರಸಗೊಬ್ಬರಗಳ ಬೆಲೆ ಗಗನಕ್ಕೇರಿದೆ.

ರಾಜ್ಯದ ಕೆಲವು ಕಾರ್ಖಾನೆಗಳಲ್ಲಿ ಒಂದು ರೀತಿಯ ಸರ್ವಾಧಿಕಾರದ ಆಡಳಿತ ನಡೆಯುತ್ತಿದೆ. ವಿಶೇಷವಾಗಿ ಹಲವಾರು ಕಾರ್ಖಾನೆಗಳು ಶಾಸಕರು, ಸಚಿವರಿಗೆ ಸೇರಿದವಾದ್ದರಿಂದ ಸರ್ಕಾರ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ ಎಂಬ ಮಾತಿದೆ. ಕಬ್ಬು ಕಳುಹಿಸಿದ 14 ದಿನಗಳಲ್ಲಿ ಹಣ ಪಾವತಿಸಬೇಕು ಎಂಬ ನಿಯಮವಿದ್ದರೂ, ತಿಂಗಳುಗಳೇ ಕಳೆದರೂ ಹಣ ಸಂದಾಯವಾಗುತ್ತಿಲ್ಲ. ಈ ಸಮಸ್ಯೆ ನೀಗಿಸಲು ಸರ್ಕಾರ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು.

ರಾಕೇಶ ಆಲಬಾಳ,ದರೂರ, ಅಥಣಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT