ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಲಾಪಕ್ಕೆ ಗೈರು: ಜನರೇ ಆಪರೇಷನ್‌ ಮಾಡಿಯಾರು

Last Updated 8 ಫೆಬ್ರುವರಿ 2019, 19:45 IST
ಅಕ್ಷರ ಗಾತ್ರ

ನಮ್ಮ ಜನಪ್ರತಿನಿಧಿಗಳು ವಿಧಾನಸಭೆಯ ಕಲಾಪಕ್ಕೆ ಗೈರುಹಾಜರಾಗಿ ಮಾಧ್ಯಮಗಳಿಂದ ತಪ್ಪಿಸಿಕೊಂಡು ಅಲ್ಲಿಲ್ಲಿ ಓಡಾಡುತ್ತಾ ಸಮಯವನ್ನು ಹಾಳು ಮಾಡುತ್ತಿದ್ದಾರೆ. ಆಡಳಿತ ನಡೆಸುತ್ತಿರುವ ಮೈತ್ರಿ ಸರ್ಕಾರದ ಒಂದು ಪಕ್ಷ, ಗೈರುಹಾಜರಾಗುವ ಇಂತಹ ಶಾಸಕರ ವಿರುದ್ಧ ವಿಪ್ ಜಾರಿ ಮಾಡಿದರೂ ಇದಕ್ಕೆ ಅವರು ಕ್ಯಾರೇ ಎನ್ನುತ್ತಿಲ್ಲ. ಶಾಸಕ ಬಸವನಗೌಡ ಪಾಟೀಲ ಯತ್ನಾಳ್ ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ, ಅಧಿವೇಶನದಲ್ಲಿ ಪಾಲ್ಗೊಳ್ಳದೆ ಚಿತ್ರಮಂದಿರದಲ್ಲಿ ಸಿನಿಮಾ ವೀಕ್ಷಿಸುತ್ತಾ ಆ ಅಮೂಲ್ಯ ಸಮಯವನ್ನು ಹಾಳು ಮಾಡಿರುವುದು ಖಂಡನೀಯ.

ಶಾಸಕರನ್ನು ಮತದಾರರು ಆರಿಸಿ ಕಳುಹಿಸಿರುವುದು ಉತ್ತಮ ಆಡಳಿತ ನಡೆಸಲಿಕ್ಕಾಗಿ. ಜನರ ಕಷ್ಟ ಕಾರ್ಪಣ್ಯಗಳ ಬಗ್ಗೆ ಅಧಿವೇಶನದ ಸಂದರ್ಭದಲ್ಲಿ ಚರ್ಚಿಸಿ ಬಗೆಹರಿಸುವುದಕ್ಕಾಗಿ. ಆದರೆ ರಾಜಕಾರಣಿಗಳು ಇದನ್ನೆಲ್ಲ ಮರೆತು ‘ಆಪರೇಷನ್‌’ ಭೀತಿಯಲ್ಲಿ ದಿನಗಳೆಯುತ್ತಿದ್ದಾರೆ. ಪರಿಸ್ಥಿತಿ ಹೀಗೇ ಮುಂದುವರಿದರೆ ಮುಂದಿನ ಚುನಾವಣೆಯಲ್ಲಿ ಜನ ಸಾಮಾನ್ಯರೇ ಇಂತಹ ಸಮಯ ಸಾಧಕ ಪ್ರತಿನಿಧಿಗಳನ್ನು ‘ಆಪರೇಷನ್‌’ಗೆ ಒಳಪಡಿಸಿ ತಕ್ಕ ಪಾಠ ಕಲಿಸುತ್ತಾರೆ.

–ರಿಯಾಝ್ ಅಹ್ಮದ್, ರೋಣ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT