ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಫ್‌ಡಿಎ, ಎಸ್‌ಡಿಎ ಅಂತಿಮಪಟ್ಟಿ ಪ್ರಕಟವಾಗಲಿ

ಅಕ್ಷರ ಗಾತ್ರ

ಕರ್ನಾಟಕ ಲೋಕಸೇವಾ ಆಯೋಗದಿಂದ ಎಫ್‌ಡಿಎ ಹಾಗೂ ಎಸ್‌ಡಿಎ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಪ್ರಾರಂಭವಾಗಿ ಸುಮಾರು ಎರಡೂವರೆ ವರ್ಷ ಕಳೆದಿದೆ. ತಾತ್ಕಾಲಿಕ ಆಯ್ಕೆಪಟ್ಟಿ ಪ್ರಕಟಿಸಿ ನಾಲ್ಕು ತಿಂಗಳು ಕಳೆದಿವೆ. ಆದರೂ ಆಯೋಗವು ಅಂತಿಮ ಪಟ್ಟಿಯನ್ನು ಪ್ರಕಟಿಸುತ್ತಿಲ್ಲವಾದ್ದರಿಂದ ಅಭ್ಯರ್ಥಿಗಳು ಆತಂಕಕ್ಕೆ ಒಳಗಾಗಿದ್ದಾರೆ.

ಆಯೋಗವು ನೇಮಕಾತಿಯಲ್ಲಿ ತಾರತಮ್ಯ ಎಸಗುತ್ತಿದೆ. ಕಳೆದ ಡಿಸೆಂಬರ್‌ನಲ್ಲಿ ಒಂದೇ ದಿನ ಎಫ್‌ಡಿಎ ಮತ್ತು ಕೆಎಎಸ್‌– 2015ರ ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಪ್ರಕಟಿಸಿತ್ತು. ಅದಾದ ಇಪ್ಪತ್ತೇ ದಿನಗಳಲ್ಲಿ ಕೆಎಎಸ್‌ ಹುದ್ದೆಗಳ ಅಂತಿಮ ಪಟ್ಟಿಯನ್ನು ಪ್ರಕಟಿಸಿದೆ. ವಿಪ‍ರ್ಯಾಸವೆಂದರೆ, ಕೆಎಎಸ್‌– 2015ರ ಆಯ್ಕೆ ಪ್ರಕ್ರಿಯೆಯ ವಿರುದ್ಧ ಕೆಎಟಿ ಹಾಗೂ ಹೈಕೋರ್ಟ್‌ನಲ್ಲಿ ಬಹಳಷ್ಟು ತಕರಾರು ಅರ್ಜಿಗಳು ಬಾಕಿ ಇದ್ದರೂ ಅದರ ಅಂತಿಮ ಪಟ್ಟಿಯನ್ನು ಪ್ರಕಟಿಸಲಾಗಿದೆ. ಎಫ್‌ಡಿಎ ಮತ್ತು ಎಸ್‌ಡಿಎ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯಲ್ಲಿ ವಿನಾಕಾರಣ ವಿಳಂಬ ಮಾಡುತ್ತಿರುವುದು ಸಮಾಜದಲ್ಲಿ ನಿರುದ್ಯೋಗ ಸಮಸ್ಯೆಯ ಬೆಂಕಿಗೆ ತುಪ್ಪ ಸುರಿದಂತಾಗಿದೆ. ಆಯೋಗವು ಕೂಡಲೇ ನೇಮಕಾತಿ ಪ್ರಕ್ರಿಯೆ ಅಂತಿಮಗೊಳಿಸಿ ಅಭ್ಯರ್ಥಿಗಳ ಆತಂಕ ನೀಗಲಿ.

ಮಹೇಶ್‌ ಮತ್ತು ಇತರರು, ಪಾವಗಡ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT