ಭಾನುವಾರ, ಜೂನ್ 26, 2022
29 °C

ವಾಚಕರ ವಾಣಿ: ಪ್ರಜಾಪ್ರಭುತ್ವದಲ್ಲಿ ಪ್ರಜೆಗಳೇ ಹೈಕಮಾಂಡ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

‘ಪಕ್ಷದ ಹೈಕಮಾಂಡ್ ಸೂಚಿಸಿದರೆ ತಕ್ಷಣ ರಾಜೀನಾಮೆ ನೀಡುತ್ತೇನೆ’ ಎಂದು ನಾಯಕತ್ವ ಬದಲಾವಣೆ ಕುರಿತು ಮುಖ್ಯಮಂತ್ರಿ ಹೇಳಿದ್ದಾರೆ (ಪ್ರ.ವಾ., ಜೂನ್‌ 7). ಈ ಹೈಕಮಾಂಡ್ ಸಂಸ್ಕೃತಿಯು ಕಾಂಗ್ರೆಸ್ ಪಕ್ಷದ ಕಾರ್ಯಾಚರಣೆಯ ವಿಧಾನವನ್ನು ವಿವರಿಸಲು ಇಲ್ಲಿಯವರೆಗೆ ಬಳಸಲಾಗುತ್ತಿದ್ದ ಪದ. ಇಂದು ಬಿಜೆಪಿ ಕೂಡ ಇದಕ್ಕೆ ಹೊರತಾಗಿಲ್ಲ.

ರಾಷ್ಟ್ರೀಯ ಪಕ್ಷಗಳು ತಮ್ಮ ಪ್ರಾದೇಶಿಕ ಮುಖ್ಯಸ್ಥರು ಏನು ಮಾಡಬೇಕೆಂದು ಸೂಚಿಸುವ ಕಮಾಂಡಿಂಗ್ ವ್ಯವಸ್ಥೆಯು ಜನರಿಂದ ಚುನಾಯಿತನಾದ ಒಬ್ಬ ನಾಯಕನಿಗೆ ಸ್ವಂತ ಅಭಿಪ್ರಾಯ ಮತ್ತು ಸ್ಥಳೀಯ ಮಟ್ಟದಲ್ಲಿ ನಿರ್ಧಾರಗಳನ್ನು ತೆಗೆದುಕೊಳ್ಳಲು ಅನುಮತಿಸುವುದಿಲ್ಲ. ಪ್ರಜಾಪ್ರಭುತ್ವದಲ್ಲಿ ಪ್ರಜೆಗಳೇ ಹೈಕಮಾಂಡ್. ಇದು ಚುನಾವಣೆ ಪೂರ್ವದಲ್ಲಿ ಅನುಸರಿಸಲು ಮಾತ್ರ ಸೀಮಿತವಾಗಿದೆ. ಒಬ್ಬ ನಾಯಕ ಅಥವಾ ಆಯ್ದ ಕೆಲವರು ಎಲ್ಲಾ ರಾಜಕೀಯ ಮತ್ತು ಆಡಳಿತಾತ್ಮಕ ನಿರ್ಧಾರಗಳನ್ನೂ ತೆಗೆದುಕೊಳ್ಳುವ ಹೈಕಮಾಂಡ್ ಆಗಿರುತ್ತಾರೆ ಎಂಬುದು ಪ್ರಜಾಪ್ರಭುತ್ವಕ್ಕೆ ಅಂಟಿದ ಶಾಪ.

–ಪ್ರವೀಣ ನಾಗಪ್ಪ ಯಲವಿಗಿ, ಹಾವೇರಿ

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು