ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಾಚಕರ ವಾಣಿ: ಅತಿಥಿಗಳ ನೇಮಕದಲ್ಲಿ ಸ್ವಜನಪಕ್ಷಪಾತ

Last Updated 19 ಅಕ್ಟೋಬರ್ 2020, 19:39 IST
ಅಕ್ಷರ ಗಾತ್ರ

ಅನೇಕ ಬಿ.ಇಡಿ ಕಾಲೇಜುಗಳಲ್ಲಿ ಪ್ರಾಂಶುಪಾಲರು ಹಾಗೂ ಆಡಳಿತ ಮಂಡಳಿಯ ಮುಖ್ಯಸ್ಥರು ಅತಿಥಿ ಉಪನ್ಯಾಸಕರ ನೇಮಕದ ವಿಷಯದಲ್ಲಿ ವಿಶ್ವವಿದ್ಯಾಲಯ ಮತ್ತು ಎನ್‌ಸಿಇಆರ್‌ಟಿ ನಿಯಮಗಳನ್ನು ಗಾಳಿಗೆ ತೂರಿದ್ದಾರೆ. ಸ್ವಜನಪಕ್ಷಪಾತದಿಂದ, ಅರ್ಹತೆ ಇಲ್ಲದ ಅನೇಕ ಅಭ್ಯರ್ಥಿಗಳನ್ನು ಅತಿಥಿ ಉಪನ್ಯಾಸಕರನ್ನಾಗಿ ನೇಮಕ ಮಾಡಿಕೊಂಡಿದ್ದಾರೆ. ಇದರಿಂದ ಎಂ.ಇಡಿ ಪದವಿ ಪಡೆದು, ಕೆ– ಸೆಟ್, ನೆಟ್ ಪಾಸಾದ ವಿದ್ಯಾರ್ಥಿಗಳಿಗೆ ಈ ಕೆಲಸ ಸಿಗದಂತಾಗಿದೆ. ಸರ್ಕಾರ ಕೂಡಲೇ ಈ ಸಂಗತಿಯನ್ನು ತನಿಖೆಗೆ ಒಳಪಡಿಸಿ, ಬಿ.ಇಡಿ ಅತಿಥಿ ಉಪನ್ಯಾಸಕರ ನೇಮಕಾತಿಯ ಜವಾಬ್ದಾರಿಯನ್ನು ಕಾಲೇಜು ಶಿಕ್ಷಣ ಇಲಾಖೆಗೆ ವಹಿಸಬೇಕು. ಅರ್ಹ ಅಭ್ಯರ್ಥಿಗಳನ್ನು ಅತಿಥಿ ಉಪನ್ಯಾಸಕರನ್ನಾಗಿ ನೇಮಿಸಿ, ವಿದ್ಯಾರ್ಥಿಗಳ ಪರಿಣಾಮಕಾರಿ ಕಲಿಕೆಗೆ ಸಹಕರಿಸಬೇಕು.

-ಮಹೇಶ ಎಂ.ಆರ್., ಮುಳ್ಳೂರು, ಎಚ್.ಡಿ.ಕೋಟೆ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT