ಭಾನುವಾರ, ಮೇ 29, 2022
22 °C

ಅಂಚೆ ಮತದಾನಕ್ಕೆ ಬೇಕು ಅವಕಾಶ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕನ್ನಡ ಸಾಹಿತ್ಯ ಪರಿಷತ್ತಿನ ಕೇಂದ್ರ, ಜಿಲ್ಲಾ ಮತ್ತು ಹೊರರಾಜ್ಯ ಘಟಕಗಳ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆಯ ದಿನಾಂಕ ನಿಗದಿಯಾಗಿದೆ. ಚುನಾವಣೆಗೆ ಸಂಬಂಧಿಸಿದ ಕಾರ್ಯಚಟುವಟಿಕೆಗಳು ಬಿರುಸಿನಿಂದ ಸಾಗುತ್ತಿವೆ. ಮತದಾರರ ಪಟ್ಟಿ ಪರಿಷ್ಕರಣೆ ಹಾಗೂ ಆಕ್ಷೇಪಣೆ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಇದರೊಂದಿಗೆ ಮತದಾರರಿಗೆ ಅಂಚೆ ಮೂಲಕ ಮತದಾನ ಮಾಡಲು ಅವಕಾಶ ಕಲ್ಪಿಸಿಕೊಡಬೇಕಾದ ಅಗತ್ಯ ಇದೆ. ಎಷ್ಟೋ ವರ್ಷಗಳ ಹಿಂದೆ ಆಜೀವ ಸದಸ್ಯರಾದ ಮತದಾರರು ಕಾಲಾನಂತರದಲ್ಲಿ ಉದ್ಯೋಗ ನಿಮಿತ್ತ ರಾಜ್ಯ, ಹೊರರಾಜ್ಯ, ಹೊರದೇಶಗಳಿಗೆ ಹೋಗಿರುತ್ತಾರೆ. ಅವರು ಚುನಾವಣೆಯ ದಿನ ಸ್ವಂತ ಜಿಲ್ಲೆ ಅಥವಾ ತಾಲ್ಲೂಕು ಕೇಂದ್ರಕ್ಕೆ ತೆರಳಿ ಮತದಾನ ಮಾಡುವುದು ಕಷ್ಟ ವಾಗುತ್ತದೆ. ಹಾಗೆ ಮತದಾನ ಮಾಡುವುದು ಸಹ ಬಹಳ ಅಪರೂಪ. ಆದ್ದರಿಂದ ಆಜೀವ ಸದಸ್ಯತ್ವದ ವಿಳಾಸದಿಂದ ನಿಗದಿತ ದೂರದಲ್ಲಿರುವವರಿಗೆ ಅಂಚೆ ಮೂಲಕ ಮತದಾನ ಮಾಡಲು ಅವಕಾಶ ಕಲ್ಪಿಸಿಕೊಡಬೇಕು.

- ನಾಗರಾಜ ಸಿರಿಗೆರೆ, ದಾವಣಗೆರೆ

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು