ಶುಕ್ರವಾರ, ಅಕ್ಟೋಬರ್ 7, 2022
28 °C

ವಾಚಕರ ವಾಣಿ | ಡಿಜಿಟಲ್‌ ಅಪ್ಲಿಕೇಶನ್‌: ಬೇಕು ನಿಯಂತ್ರಣ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮೊಬೈಲ್‌ ಫೋನ್‌ಗಳಲ್ಲಿ ಡಿಜಿಟಲ್ ಅಪ್ಲಿಕೇಶನ್‌ಗಳ ಮೂಲಕ ವೈಯಕ್ತಿಕ ಸಾಲಗಳನ್ನು ಪಡೆದ ಸಾರ್ವಜನಿಕರು ಪದೇ ಪದೇ ಕಿರುಕುಳಕ್ಕೆ ಒಳಗಾದ ಹಲವಾರು ಪ್ರಕರಣಗಳು ವರದಿಯಾಗಿವೆ. ಈ ಕಾರಣದಿಂದಲೇ ಕೆಲವರು ಆತ್ಮಹತ್ಯೆಯನ್ನೂ ಮಾಡಿಕೊಂಡಿದ್ದಾರೆ ಎಂಬ ಮಾತುಗಳಿವೆ. ಮೊಬೈಲ್‌ ಫೋನ್‌ಗಳಲ್ಲಿ ಹೆಚ್ಚಿನ ಅಪ್ಲಿಕೇಶನ್‌ಗಳನ್ನು ಅಳವಡಿಸುವಾಗ ಬಳಕೆದಾರರ ಫೋಟೊಗಳು ಮತ್ತು ಫೋನ್ ಸಂಪರ್ಕಗಳನ್ನು ಪ್ರವೇಶಿಸಲು ಅವು ಅನುಮತಿಯನ್ನು ಬಯಸುತ್ತವೆ. ಅನುಮತಿಯನ್ನು ಒದಗಿಸದಿದ್ದರೆ, ಅಪ್ಲಿಕೇಶನ್‌ಗಳು ಕಾರ್ಯನಿರ್ವಹಿಸುವುದಿಲ್ಲ. ಅಂತಹ ಕೆಲವು ಅಪ್ಲಿಕೇಶನ್‌ಗಳು ಬಳಕೆದಾರರ ಫೋಟೊವನ್ನು ದುರ್ಬಳಕೆ ಮಾಡಿಕೊಂಡ ವರದಿಗಳು ಕೂಡ ಇವೆ. ಇಂತಹ ಡಿಜಿಟಲ್ ಅಪ್ಲಿಕೇಶನ್‌ಗಳು ಬಳಕೆದಾರರ ಮಾಹಿತಿಯನ್ನು ದುರ್ಬಳಕೆ ಮಾಡುವುದನ್ನು ತಡೆಯಲು ಸರ್ಕಾರ ಈಗಿಂದೀಗಲೇ ಕ್ರಮಗಳನ್ನು ತೆಗೆದುಕೊಳ್ಳುವುದು ಅತ್ಯಗತ್ಯ.

ಬಿ.ಎನ್.ಭರತ್, ಬೆಂಗಳೂರು

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು