ಶುಕ್ರವಾರ, ಡಿಸೆಂಬರ್ 4, 2020
24 °C

ಬೆಲೆ ನಿಯಂತ್ರಣ: ವಾಸ್ತವ ಅರಿಯಿರಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕೊರೊನಾ ಸೋಂಕಿನ ಕಾರಣದಿಂದ ಭಾರತ ಒಳಗೊಂಡಂತೆ ವಿಶ್ವದ ಹಲವಾರು ರಾಷ್ಟ್ರಗಳಲ್ಲಿ ಲಾಕ್‌ಡೌನ್ ಹೇರಲಾಯಿತು. ಈಗ ಸಮಾಧಾನ ಎಂಬಂತೆ ಎಲ್ಲಾ ಕ್ಷೇತ್ರಗಳ ಕಾರ್ಯಚಟುವಟಿಕೆಗಳು ಪುನರಾರಂಭಗೊಂಡಿವೆ. ಆದರೆ ಲಾಕ್‌ಡೌನ್ ಸಂದರ್ಭದಲ್ಲಿ ಆದ ನಷ್ಟವನ್ನು ತುಂಬಿಕೊಳ್ಳಲು ಚಿಲ್ಲರೆ ವ್ಯಾಪಾರಿಗಳು, ಆಸ್ಪತ್ರೆಗಳು, ವ್ಯಾಪಾರಿ ಕೇಂದ್ರಗಳು... ಹೀಗೆ ಎಲ್ಲ ಕ್ಷೇತ್ರಗಳಲ್ಲೂ ಬೆಲೆಯನ್ನು ಗಗನಕ್ಕೆ ಏರಿಸಲಾಗಿದೆ. ಇದರ ಪರಿಣಾಮ ಜನಸಾಮಾನ್ಯರಿಗೆ ನೇರವಾಗಿ ತಟ್ಟುತ್ತಿದೆ. ವ್ಯಾಪಾರಿಗಳು ವಿಪರೀತ ಲಾಭದಾಸೆಗೆ ಒಳಗಾಗದೆ, ಸಾಮಾನ್ಯ ಜನರ ಜೀವನೋಪಾಯವನ್ನು ಮತ್ತು ಅವರ ಆರ್ಥಿಕ ಪರಿಸ್ಥಿತಿಯನ್ನು ಅರಿತು ಬೆಲೆ ನಿಗದಿಪಡಿಸುವುದು ಒಳ್ಳೆಯದು. ಬೆಲೆ ನಿಯಂತ್ರಣಕ್ಕೆ ಸರ್ಕಾರವೂ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು.

-ವೀರಪ್ಪ ತಿಪ್ಪಣ್ಣ ಈಟಿ, ಧಾರವಾಡ

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.