ಮಂಗಳವಾರ, ಜನವರಿ 26, 2021
16 °C

ಖಾಸಗಿತನ: ತೆರೆದ ಗುಟ್ಟು!

ವಾಚಕರ ವಾಣಿ Updated:

ಅಕ್ಷರ ಗಾತ್ರ : | |

ಕ್ರಿಕೆಟಿಗ ವಿರಾಟ್ ಕೊಹ್ಲಿ ತಮ್ಮ ಪತ್ನಿ ಅನುಷ್ಕಾ ಶರ್ಮಾ ಸೋಮವಾರ ಹೆಣ್ಣು ಮಗುವಿಗೆ ಜನ್ಮ ನೀಡಿದ ಸಂತಸದ ಸುದ್ದಿಯನ್ನು ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದಾರೆ. ಈ ಸಂದರ್ಭದಲ್ಲಿ ಅವರು, ತಮ್ಮ ಖಾಸಗಿತನವನ್ನು ಎಲ್ಲರೂ ಗೌರವಿಸುವುದಾಗಿ ಭಾವಿಸುತ್ತೇನೆ ಎಂದು ಹೇಳಿರುವುದಾಗಿ ವರದಿಯಾಗಿದೆ. ಆದರೆ, ಇಂತಹ ಸೆಲೆಬ್ರಿಟಿಗಳು ಪ್ರಾರಂಭದಿಂದಲೂ ತಮ್ಮ ಬದುಕಿನಲ್ಲಿ ನಡೆಯುವ ಸರ್ವ ವಿಚಾರಗಳನ್ನೂ ಸಾಮಾಜಿಕ ಜಾಲತಾಣಗಳಲ್ಲಿ ಢಾಣಾ ಡಂಗುರವಾಗಿಸುತ್ತಾರೆ. ಆದರೂ ತಮ್ಮ ಖಾಸಗಿತನವನ್ನು ಎಲ್ಲರೂ ಗೌರವಿಸಬೇಕು ಎಂದು ಅಪೇಕ್ಷಿಸುವುದು ಯುಗಾಂತರದ ವ್ಯಂಗ್ಯವೇ ಸರಿ.

- ವಿ.ಕೆ.ವೆಂಕಟ ಸುಬ್ಬರಾವ್, ಹುಬ್ಬಳ್ಳಿ

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು