ಗುರುವಾರ , ಮೇ 26, 2022
24 °C

ವಾಚಕರ ವಾಣಿ| ‘ಸಮಾನತೆಯ ಕಡೆಗೆ’ ಮರುಪ್ರಸಾರವಾಗಲಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ರಾಜ್ಯ ಸಮಾಜ ಕಲ್ಯಾಣ ಇಲಾಖೆಯು ಅಸ್ಪೃಶ್ಯತೆ ನಿವಾರಣೆ ಮತ್ತು ಅಂತರ್ಜಾತಿ ವಿವಾಹದ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ‘ಸಮಾನತೆಯ ಕಡೆಗೆ’ ಎಂಬ ಕನ್ನಡ ಚಲನಚಿತ್ರವನ್ನು ಇತ್ತೀಚೆಗೆ ‘ಚಂದನ’ ವಾಹಿನಿಯಲ್ಲಿ ಪ್ರಸಾರ ಮಾಡಿತು. ಬಹಳ ಅರ್ಥಪೂರ್ಣವಾದ ಕಾರ್ಯಕ್ರಮ ಇದಾಗಿತ್ತು. ದೇಶದ ಅಭಿವೃದ್ಧಿಗೆ ಮಾರಕವಾಗಿರುವ ಸಂಗತಿಗಳಲ್ಲಿ ಅಸ್ಪೃಶ್ಯತಾ ಆಚರಣೆಯೂ ಒಂದು. ಈ ಅನಿಷ್ಟ ಪದ್ಧತಿ ನಾಶವಾಗಬೇಕಿದೆ.

ಇದಕ್ಕೆ ಪೂರಕವಾಗಿ, ಚಂದನ ವಾಹಿನಿಯಲ್ಲಿ ಮೂಡಿಬಂದ ಕಾರ್ಯಕ್ರಮವನ್ನು ರಾಜ್ಯ ಸರ್ಕಾರವು ವಾರ್ತಾ ಇಲಾಖೆ ಮೂಲಕ ನಾಡಿನ ಎಲ್ಲ ಶಾಲಾ ಕಾಲೇಜುಗಳಲ್ಲಿ ಮರುಪ್ರಸಾರ ಮಾಡಿ, ವಿದ್ಯಾರ್ಥಿಗಳು, ಯುವಸಮೂಹದಲ್ಲಿ ಜಾಗೃತಿ ಮೂಡಿಸಬೇಕು.

ಡಾ. ಎಸ್.ನಾಗರಾಜು, ಬೆಂಗಳೂರು

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.